ಉಚ್ಚಿಲದಲ್ಲಿ ಮೊಗವೀರ ಮಹಾಜನ ಸಂಘದಿಂದ ಮೀನುಗಾರಿಕೆ, ಬಂದರು ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ
ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಉಚ್ಚಿಲ ಮೊಗವೀರ ಮಹಾಜನ ಸಂಘದ ವತಿಯಿಂದ ಶುಕ್ರವಾರ ಸಂಜೆ ೭ ಗಂಟೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಜರಗಿತು.
ಈ ಸಂದರ್ಭ ಅವರು ಮಾತನಾಡಿ, ಮೀನುಗಾರರ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಶ್ರಮಿಸೋಣ. ಮೀನುಗಾರನಾಗಿ ಮೀನುಗಾರರ ಕಷ್ಠದ ಬದುಕು ನನಗೆ ಚೆನ್ನಾಗಿ ಗೊತ್ತು. ಹೆಜಮಾಡಿ, ಮಲ್ಪೆ ಬಂದರಿನ ಸಮಸ್ಯೆ ಬಗ್ಗೆ ಶೀಘ್ರವಾಗಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.
ಮೀನುಗಾರ ಮುಖಂಡ ಡಾ. ಜಿ ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಆನಂದ ಸಿ. ಕುಂದರ್, ಪ್ರಸಾದ್ ರಾಜ್ ಕಾಂಚನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಶಶಿಧರ್, ರಮೇಶ್ ಕಾಂಚನ್, ಸುಭಾಶ್ಚಂದ್ರ ಕಾಂಚನ್, ಸುಧಾಕರ ಕುಂದರ್, ಮಂಜುನಾಥ ಸೊಣೇ ಜಮಗಾರ್, ರಾಜೇಂದ್ರ ಸುವರ್ಣ ಹಿರಿಯಡಕ, ಚೇತನ್ ಬೇಂಗ್ರೆ, ಮಹಿಳಾ ಸಂಘದ ಕಾರ್ಯದರ್ಶಿ ಉಷಾ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

