• Home  
  • ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲಿಯೇ ಮೃತ್ಯು
- ಅಪರಾಧ

ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲಿಯೇ ಮೃತ್ಯು

Share: ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಲದಲ್ಲಿ ನಡೆದಿದೆ. ಆಟೋ ಚಾಲಕ ಪಂಬೆತ್ತಾಡಿ ಗ್ರಾಮದ ಚೀಮುಳ್ಳು ನಿವಾಸಿ ಸುದರ್ಶನ್ (35) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂ.26ರ ಸೋಮವಾರ ಸಂಜೆ ಮಾಣಿಲ ಗ್ರಾಮದ ಬಾವಲಿಮೂಲೆಗೆ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ […]

ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಲದಲ್ಲಿ ನಡೆದಿದೆ.

ಆಟೋ ಚಾಲಕ ಪಂಬೆತ್ತಾಡಿ ಗ್ರಾಮದ ಚೀಮುಳ್ಳು ನಿವಾಸಿ ಸುದರ್ಶನ್ (35) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂ.26ರ ಸೋಮವಾರ ಸಂಜೆ ಮಾಣಿಲ ಗ್ರಾಮದ ಬಾವಲಿಮೂಲೆಗೆ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ – ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.