• Home  
  • ಮಂಗಳೂರು; ಮಕ್ಕಳಿಗೆ ವಾಹನ ಕೊಟ್ಟು ಅಪಘಾತವಾದರೆ ಪೋಷಕರ ಮೇಲೆ ಕೇಸ್
- ಅಪರಾಧ

ಮಂಗಳೂರು; ಮಕ್ಕಳಿಗೆ ವಾಹನ ಕೊಟ್ಟು ಅಪಘಾತವಾದರೆ ಪೋಷಕರ ಮೇಲೆ ಕೇಸ್

Share:   ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ದ್ವಿಚಕ್ರ ವಾಹನ ಅಪಘಾತಗಳ ಬಗ್ಗೆ ನಿನ್ನೆ ನಡೆದ ನಗರ ಪೊಲೀಸ್ ಕಮೀಷನರ್ ಅವರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು, ಇನ್ನು ಮುಂದೆ ಮಕ್ಕಳು ದ್ವಿಚಕ್ರ ಚಲಾಯಿಸಿ ಅಪಘಾತ […]

  ಮಂಗಳೂರು: ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.

ದ್ವಿಚಕ್ರ ವಾಹನ ಅಪಘಾತಗಳ ಬಗ್ಗೆ ನಿನ್ನೆ ನಡೆದ ನಗರ ಪೊಲೀಸ್ ಕಮೀಷನರ್ ಅವರ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರು, ಇನ್ನು ಮುಂದೆ ಮಕ್ಕಳು ದ್ವಿಚಕ್ರ ಚಲಾಯಿಸಿ ಅಪಘಾತ ನಡೆಸಿದರೆ ಮಕ್ಕಳ ಹೆತ್ತವರ ವಿರುದ್ಧವೇ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ರೀತಿ ಘಟನೆ ನಡೆದರೆ ಆರ್‌ಸಿ ಓನರ್ ವಿರುದ್ಧ ಕೂಡ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದು, ಈ ಬಗ್ಗೆ ಮಕ್ಕಳ ಹೆತ್ತವರಿಗೆ ಕೂಡ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.