• Home  
  • ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ನೆಟ್ಟಿಗರು ಗರಂ
- Uncategorised

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ನೆಟ್ಟಿಗರು ಗರಂ

Share: ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ನೆಟ್ಟಿಗರು ಗರಂ ಮಧ್ಯಪ್ರದೇಶ: ದಲಿತ ವ್ಯಕ್ತಿಯ ಮೇಲೆ ಸ್ಥಳೀಯ ಬಿಜೆಪಿ ನಾಯಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟ ಘಟನೆ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸಂಭವಿಸಿದೆ.   ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.    ಈ ಬೆನ್ನಲ್ಲೇ ಇದೀಗ ಸಿಧಿ ಪೊಲೀಸರು ಆರೋಪಿ ಸ್ಥಳೀಯ ಬಿಜೆಪಿ ನಾಯಕ ಪ್ರವೇಶ್​ ಶುಕ್ಲ ಎಂಬಾತನನ್ನು ಬಂಧಿಸಿದ್ದಾರೆ. […]

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ನೆಟ್ಟಿಗರು ಗರಂ

ಮಧ್ಯಪ್ರದೇಶ: ದಲಿತ ವ್ಯಕ್ತಿಯ ಮೇಲೆ ಸ್ಥಳೀಯ ಬಿಜೆಪಿ ನಾಯಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟ ಘಟನೆ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸಂಭವಿಸಿದೆ.

  ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

 ಈ ಬೆನ್ನಲ್ಲೇ ಇದೀಗ ಸಿಧಿ ಪೊಲೀಸರು ಆರೋಪಿ ಸ್ಥಳೀಯ ಬಿಜೆಪಿ ನಾಯಕ ಪ್ರವೇಶ್​ ಶುಕ್ಲ ಎಂಬಾತನನ್ನು ಬಂಧಿಸಿದ್ದಾರೆ.

 ಈ ವಿಚಾರವಾಗಿ ಮಾತನಾಡಿದ ಸಿಧಿ ಜಿಲ್ಲೆಯ ಹೆಚ್ಚುವರಿ ಎಸ್ಪಿ ಅಂಜುಲತಾ ಪಟ್ಲೆ, ವೈರಲ್​ ವಿಡಿಯೋ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಆರೋಪಿ ಪ್ರವೇಶ್​ ಶುಕ್ಲಾರನ್ನು ವಶಕ್ಕೆ ಪಡೆದಿದ್ದೇವೆ. ಪ್ರವೇಶ್​ ಶುಕ್ಲಾರನ್ನು ತನಿಖೆಗೆ ಒಳಪಡಿಸಲಾಗಿದ್ದು,  ಶೀಘ್ರದಲ್ಲಿಯೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬುಡಕಟ್ಟು ಜನಾಂಗಕ್ಕೆ ಸೇರಿದ ಸಿಧಿ ಜಿಲ್ಲೆಯ ವ್ಯಕ್ತಿಯೊಬ್ಬನ ಮೇಲೆ ಬಿಜೆಪಿ ಮುಖಂಡ ಪ್ರವೇಶ್​ ಶುಕ್ಲ ಮೂತ್ರ ವಿಸರ್ಜನೆ ಮಾಡಿದ್ದರು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ನೆಟ್ಟಿಗರು ಪ್ರವೇಶ್​ ಶುಕ್ಲಾ ಬಂಧನಕ್ಕೆ ಆಗ್ರಹಿಸಿದ್ದರು.

ಈ ವಿಚಾರವಾಗಿ ಟ್ವೀಟ್​ ಮಾಡಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್ ಚೌಹಾಣ್​, ಈ ವೈರಲ್​ ವಿಡಿಯೋವನ್ನು ನಾನು ಗಮನಿಸಿದ್ದೇನೆ . ಇಂಥಹ ಕ್ರಮಗಳನ್ನು ಖಂಡಿತವಾಗಿಯೂ ನಾವು ಖಂಡಿಸುತ್ತೇವೆ . ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.