• Home  
  • ದ. ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು ನಗರ ಪ್ರದಕ್ಷಿಣೆ
- ಕರಾವಳಿ - ಶಾಲಾ ಕಾಲೇಜು

ದ. ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು ನಗರ ಪ್ರದಕ್ಷಿಣೆ

Share: ಗುರುವಾರ ಶಾಲಾ ಕಾಲೇಜಿಗೆ ರಜೆ ಮಂಗಳೂರು : ನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡರು. ನಗರದ ಪಂಪ್‌ ವೇಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಮಿಂಚಿನ ಸಂಚಾರ ನಡೆಸಿ ಮಳೆಯಿಂದ ಆಗಿರುವ ಪರಿಸ್ಥಿತಿಯನ್ನು ಪರಿಶೀಲಿಸಿದರು. ತೀವ್ರ ಸಮಸ್ಯೆ ಉಂಟಾಗಿರುವ ಕಡೆಗಳಲ್ಲಿ ತುರ್ತು ಕೆಲಸಗಳನ್ನು ಕೈಗೊಂಡು ಜನರಿಗೆ ಸಮಸ್ಯೆ ಆಗದ ರೀತಿಯಲ್ಲಿ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ […]

ಗುರುವಾರ ಶಾಲಾ ಕಾಲೇಜಿಗೆ ರಜೆ

ಮಂಗಳೂರು : ನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡರು.

ನಗರದ ಪಂಪ್‌ ವೇಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಮಿಂಚಿನ ಸಂಚಾರ ನಡೆಸಿ ಮಳೆಯಿಂದ ಆಗಿರುವ ಪರಿಸ್ಥಿತಿಯನ್ನು ಪರಿಶೀಲಿಸಿದರು.

ತೀವ್ರ ಸಮಸ್ಯೆ ಉಂಟಾಗಿರುವ ಕಡೆಗಳಲ್ಲಿ ತುರ್ತು ಕೆಲಸಗಳನ್ನು ಕೈಗೊಂಡು ಜನರಿಗೆ ಸಮಸ್ಯೆ ಆಗದ ರೀತಿಯಲ್ಲಿ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮಂಗಳೂರು ಮಹಾನಗರ ಪಾಲಿಕೆ ಎಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಜತೆಗೆ ಇದ್ದರು.

ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವ ರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 ರಂದು (ಗುರುವಾರ) ದ.ಕ  ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೆ ರಜೆ ಘೋಷಿಸಿ ಮಂಗಳೂರು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಆದೇಶಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.