• Home  
  • ಆರ್‌ ಆರ್‌  ನಗರ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ : ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್    
- ಅಪರಾಧ

ಆರ್‌ ಆರ್‌  ನಗರ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ : ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್    

Share: ಕರ್ನಾಟಕ ಆರ್‌ ಆರ್‌  ನಗರ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ – ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ದೂರು ಆರ್‌ ಆರ್‌  ನಗರ : ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಆರ್.ಆರ್.ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.  ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜತೆಗೆ […]

ಕರ್ನಾಟಕ ಆರ್‌ ಆರ್‌  ನಗರ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ – ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಯಲಹಂಕ ತಹಶೀಲ್ದಾರ್ ದೂರು

ಆರ್‌ ಆರ್‌  ನಗರ : ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಆರ್.ಆರ್.ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

 ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟ ಮಾಡಿದ್ದಾರೆ ಎಂದು ಯಲಹಂಕ ತಹಶೀಲ್ದಾರ್ ಅನಿಲ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು.

 ದೂರಿನ ಮೇರೆಗೆ ಇದೀಗ ಎಫ್‌ಐಆರ್ ದಾಖಲಾಗಿದೆ.

 ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅನಿಲ್ ದೂರು ದಾಖಲು ದಾಖಲಿಸಿದ್ದರು.

 ಹುಣಸಮಾರನಹಳ್ಳಿ ಸರ್ವೆ ನಂ. 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮಾ ಶಾಸಕ ಮುನಿರತ್ನ ವಿರುದ್ಧ ಸ್ಪೋಟಕ ಕಾಯ್ದೆ 1884 US 9B(1b), ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅನ್ವಯ ದೂರು ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.