• Home  
  • ಪಡುಕುತ್ಯಾರು ಆನೆಗುಂದಿ ಪೀಠದ ಕಾಳಹಸ್ತೇಂದ್ರ  ಸ್ವಾಮೀಜಿ ಅವರ ಜನ್ಮವರ್ಧಂತಿ, ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ
- ಕರಾವಳಿ

ಪಡುಕುತ್ಯಾರು ಆನೆಗುಂದಿ ಪೀಠದ ಕಾಳಹಸ್ತೇಂದ್ರ  ಸ್ವಾಮೀಜಿ ಅವರ ಜನ್ಮವರ್ಧಂತಿ, ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ

Share: ಶಿರ್ವ: ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಪಡುಕುತ್ಕಾರಿನ ಆನೆಗುಂದಿ ಮಠದಲ್ಲಿ ನಡೆಯಿತು. ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಮಾತನಾಡಿ, ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ವಿಶ್ವಕರ್ಮ  ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಆನೆಗುಂದಿ ಮಠವನ್ನು‌ಅಭಿವೃದ್ಧಿ ಪಥದತ್ತ ಮುನ್ನಡೆಸುವ‌ನಿಟ್ಟಿನಲದಲಿ‌ಸರಕಾರದ ಅನುದಾನ‌‌ […]

ಶಿರ್ವ: ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಪಡುಕುತ್ಕಾರಿನ ಆನೆಗುಂದಿ ಮಠದಲ್ಲಿ ನಡೆಯಿತು.

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಮಾತನಾಡಿ, ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ವಿಶ್ವಕರ್ಮ  ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಆನೆಗುಂದಿ ಮಠವನ್ನು‌ಅಭಿವೃದ್ಧಿ ಪಥದತ್ತ ಮುನ್ನಡೆಸುವ‌ನಿಟ್ಟಿನಲದಲಿ‌ಸರಕಾರದ ಅನುದಾನ‌‌ ಒದಗಿಸಲಾಗುವುದು.ಸರ್ವ‌ ಜನಾಂಗಕ್ಕೆ‌‌ ಒಳೊತ‌ಬಯಸುವ‌ಕಾಳಹಸ್ತೇಂದ್ರ‌‌ಸ್ವಾಮೀಜಿ‌ಸರ್ವರ‌ಸ್ವಾಮೀಜಿಯಾಗಿ ಮೂಡಿ‌ಬಂದಿದ್ದಾರೆ ಎಂದರು.

 ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ದೀಪ ಪ್ರಜ್ವಲನಗೊಳಿಸಿದರು.

  ಆನೆಗುಂದಿ ಪ್ರತಿಷ್ಠಾನದ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಅಚಾರ್ಯ ವಡೇರಹೋಬಳಿ ಅಧ್ಯಕ್ಷತೆ, ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನ ಧರ್ಮದರ್ಶಿ ವಡೇರ ಆನಂದ ಸಮಾಜ ಸೇವಕರಾದ ಮಿಥುನ್ ಎಂ ರೈ, ಕ್ಯಾ. ಬ್ರಿಜೇಶ್‌ ಚೌಟ, ಜ್ಯೋತಿಷಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

 ಸಂಚಾಲಕ ಸೂರ್ಯ ಆಚಾರ್ಯ ಹಳೆಯಂಗಡಿ, ಅನೆಗುಂದಿ ಸರಸ್ವತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಸರಸ್ವತಿ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಅಚಾರ್ಯ ಬೆಳುವಾಯಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್‌ ಆಚಾರ್ಯ ಕೆಮ್ಮಣ್ಣು ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಅಚಾರ್ಯ ಉಡುಪಿ, ಕುತ್ಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಎಸ್ ಕುತ್ಯಾರು ಭಾಗವಹಿಸುವರು. ಆಸ್ಥಾನ ವಿದ್ವಾನ್ ಪದವಿ ಪ್ರದಾನ: ಆನೆಗುಂದಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಜನ್ಮವ ರ್ಧಂತಿ ಉತ್ಸವದ ಧರ್ಮ ಪ್ರಯುಕ್ತ ಸಂಸತ್ತಿನಲ್ಲಿ ಮಹಾಸಂಸ್ಥಾನದ ವಿದ್ವಾನ್ ಮಂಡಳಿಗೆ ವೈದಿಕ, ಗುರು ಪರಂಪರೆಗೆ ಅನುಪಮ ಸೇವೆ ಸಲ್ಲಿಸುತ್ತಿರುವ ಶಂಕರಾ ಚಾರ್ಯ ಕಡ್ಡಾಸ್ಕರ್ ಪಂಡಿತ್‌ ಹುಬ್ಬಳ್ಳಿ ಅವರಿಗೆ ಆಸ್ಥಾನ ವಿದ್ವಾನ್ ಪದವಿ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಪ್ರಧಾನ ಮಾಡಿದರು.

ಕಾರ್ಯದರ್ಶಿ ಲೋಕೇಶ್‌ ಎಂಬಿ ಆಚಾರ್‌ ಸ್ವಾಗತಿಸಿದರು. ಗೀತಾ ಚಂದ್ರ ಕಾರ್ಕಳ, ಗಂಗಾಧರ ಕೊಂಡೆವೂರು ಮತ್ತು ಸುರೇಶ್‌ ಆಚಾರ್ಯ ನಿರೂಪಿಸಿದರು.

ಕೋಶಾಧಿಕಾರಿ ಅರವಿಂದ ಆಚಾರ್ಯ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.