ಸದನದಲ್ಲಿ ಅತಿರೇಕದ ವರ್ತನೆ: ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ 10 ಮಂದಿ ಬಿಜೆಪಿ ಶಾಸಕರ ಅಮಾನತು
ಬೆಂಗಳೂರು: ವಿಧಾನಸಭೆ ಕಲಾಪದ ಸಂದರ್ಭ ಅತಿರೇಕದ ವರ್ತನೆ ತೋರಿದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.
ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.

