ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಚುನಾವಣೆ: ಅಧ್ಯಕ್ಷ ರಾಗಿ ಮೊಹಮ್ಮದ್ ಶರೀಫ್ , ಪ್ರ. ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ ಆಯ್ಕೆ
ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಬುಧವಾರ ಜರುಗಿತು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ
ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ , ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

