• Home  
  • ಚಂದ್ರಯಾನ 3 : ಮೂರನೇ ಕಕ್ಷೆಗೆ GSLV MAK3 ಎಂಟ್ರಿ
- ದೇಶ-ವಿದೇಶ - ಪ್ರಯಾಣ

ಚಂದ್ರಯಾನ 3 : ಮೂರನೇ ಕಕ್ಷೆಗೆ GSLV MAK3 ಎಂಟ್ರಿ

Share: ಚಂದ್ರಯಾನ 3 : ಮೂರನೇ ಕಕ್ಷೆಗೆ GSLV MAK3 ಎಂಟ್ರಿ ಶ್ರೀ ಹರಿಕೋಟ: ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜುಲೈ 14 ರಂದು ಉಡಾವಣೆ ಮಾಡಲಾದ ಚಂದ್ರಯಾನ-3 ನೌಕೆ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಯೋಜನೆ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51,400 ಕಿಮೀ x 228 ಕಿಮೀ ಕಕ್ಷೆ ತಲುಪಿದೆ. ಇಂದು ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ. […]

ಚಂದ್ರಯಾನ 3 : ಮೂರನೇ ಕಕ್ಷೆಗೆ GSLV MAK3 ಎಂಟ್ರಿ

ಶ್ರೀ ಹರಿಕೋಟ: ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜುಲೈ 14 ರಂದು ಉಡಾವಣೆ ಮಾಡಲಾದ ಚಂದ್ರಯಾನ-3 ನೌಕೆ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಯೋಜನೆ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51,400 ಕಿಮೀ x 228 ಕಿಮೀ ಕಕ್ಷೆ ತಲುಪಿದೆ. ಇಂದು ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಹಲವು ವಿಶೇಷತೆ ಒಳಗೊಂಡಿದ್ದು, ಲ್ಯಾಂಡರ್, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ.

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆಯನ್ನು GSLV-MK3 ರಾಕೆಟ್ ಹೊತ್ತೊಯ್ದಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆ ಉಡಾವಣೆ ಮಾಡಲಾಗಿತ್ತು.

Leave a comment

Your email address will not be published. Required fields are marked *

eMedia Kannada  @2025. All Rights Reserved.