• Home  
  • ಉಳ್ಳಾಲ;  ಸಹಪಾಠಿಯ ಚೂರಿ ಎಸೆದ 9ನೇ ತರಗತಿ ವಿದ್ಯಾರ್ಥಿ
- ಅಪರಾಧ

ಉಳ್ಳಾಲ;  ಸಹಪಾಠಿಯ ಚೂರಿ ಎಸೆದ 9ನೇ ತರಗತಿ ವಿದ್ಯಾರ್ಥಿ

Share: ಉಳ್ಳಾಲ;  ಸಹಪಾಠಿಯ ಚೂರಿ ಎಸೆದ 9ನೇ ತರಗತಿ ವಿದ್ಯಾರ್ಥಿ ಉಳ್ಳಾಲ: ಸಾಂಬಾರು ಚೆಲ್ಲಿದ ಕಾರಣಕ್ಕೆ ಸಣ್ಣ ವಿವಾದ ತಾರಕಕ್ಕೇರಿ ಒಬ್ಬ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸ್ಕೂಲ್ ನಲ್ಲಿ ನಡೆದಿದೆ. ಮಧ್ಯಾಹ್ನ ಊಟದ ಹೊತ್ತಿನಲ್ಲಿ 9 ನೇ ತರಗತಿಯ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಾನೆ.  ಅಲ್ಲಿಂದ […]

ಉಳ್ಳಾಲ;  ಸಹಪಾಠಿಯ ಚೂರಿ ಎಸೆದ 9ನೇ ತರಗತಿ ವಿದ್ಯಾರ್ಥಿ

ಉಳ್ಳಾಲ: ಸಾಂಬಾರು ಚೆಲ್ಲಿದ ಕಾರಣಕ್ಕೆ ಸಣ್ಣ ವಿವಾದ ತಾರಕಕ್ಕೇರಿ ಒಬ್ಬ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸ್ಕೂಲ್ ನಲ್ಲಿ ನಡೆದಿದೆ.

ಮಧ್ಯಾಹ್ನ ಊಟದ ಹೊತ್ತಿನಲ್ಲಿ 9 ನೇ ತರಗತಿಯ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಾನೆ.

 ಅಲ್ಲಿಂದ ಮುಂದೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಚೂರಿ ತೆಗೆದು ಆತನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಉಪಪ್ರಾಂಶುಪಾಲರು  ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ‌ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭೇಟಿ ನೀಡಿ ಬಾಲಕನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಒಂಬತ್ತನೆಯ ತರಗತಿ ವಿದ್ಯಾರ್ಥಿ ಚೂರಿ ಬಸ್ ಸ್ಟಾಂಡ್ ನಲ್ಲಿ ಬಿದ್ದು ಸಿಕ್ಕಿದ್ದು ಎಂದು ಹೇಳಿದ್ದಾನೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.