• Home  
  • ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ  
- ಅಪರಾಧ

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ  

Share: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ    ಬೆಂಗಳೂರು : ರಾಜ್ಯ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಇಂದು (ಬುಧವಾರ) ಬೆಂಗಳೂರಿನಲ್ಲಿ ಸೌಜನ್ಯ ಕುಟುಂಬಸ್ಥರು ಹಾಗೂ ಹಿಂದೂ ಪರ ಮುಖಂಡ ಮಹೇಶ್ ತಿಮರೋಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.  12 ವರ್ಷಗಳ ಹಿಂದೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಹಾಗೂ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ […]

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಸೌಜನ್ಯ ಕುಟುಂಬ  

 ಬೆಂಗಳೂರು : ರಾಜ್ಯ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಇಂದು (ಬುಧವಾರ) ಬೆಂಗಳೂರಿನಲ್ಲಿ ಸೌಜನ್ಯ ಕುಟುಂಬಸ್ಥರು ಹಾಗೂ ಹಿಂದೂ ಪರ ಮುಖಂಡ ಮಹೇಶ್ ತಿಮರೋಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

 12 ವರ್ಷಗಳ ಹಿಂದೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಸೌಜನ್ಯ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಸಹೋದರಿ ಸೌಂದರ್ಯ ಹಾಗೂ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ತಿಮರೋಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ತಪ್ಪಿತಸ್ಥರನ್ನು ಕೂಡಲೇ ಜೈಲಿಗಟ್ಟುವಂತೆ ಮನವಿ ಮಾಡಿದ್ದಾರೆ.

 ಧರ್ಮಸ್ಥಳ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ ಕಾಲೇಜು ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದಳು.

  ದುಷ್ಕರ್ಮಿಗಳು ಈಕೆಯನ್ನು ಕೊಲೆ ಕೂಡ ಮಾಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಸಂತೋಷ್ ರಾವ್ ಎಂಬ ನಿರಪರಾಧಿಯನ್ನು ಬಂಧಿಸಿದ್ದು, ಇದೀಗ ಸಂತೋಷ್ ಬಿಡುಗಡೆಯಾಗಿದ್ದಾರೆ.

 ಅಪರಾಧಿಗಳು ಯಾರೆಂದು ಗೊತ್ತಿದ್ದರೂ ಸಹ ಪ್ರಭಾವದಿಂದಾಗಿ ಕಾನೂನು ವ್ಯವಸ್ಥೆ ಕಣ್ಮುಚ್ಚಿ ಕುಳಿತಿದೆ ಎಂಬುದು ಸೌಜನ್ಯ ಕುಟುಂಬಸ್ಥರ ಆರೋಪವಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.