• Home  
  •  ಉಡುಪಿ ವಿಡಿಯೋ ಪ್ರಕರಣ: ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ
- ಅಪರಾಧ

 ಉಡುಪಿ ವಿಡಿಯೋ ಪ್ರಕರಣ: ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

Share: ಉಡುಪಿ ವಿಡಿಯೋ ಪ್ರಕರಣ: ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ  ಬೆಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, ‘ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?’ […]

ಉಡುಪಿ ವಿಡಿಯೋ ಪ್ರಕರಣ: ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

 ಬೆಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, ‘ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?’ ಎಂದು ಪೋಸ್ಟ್‌ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಅವರನ್ನು ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿದ್ದಾರೆ. ತಮಕೂರು ಮೂಲದ ಶಕುಂತಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಂಧನದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಹಿಂದೆಯೂ ಇವರು ಒಡಿಸ್ಸಾ ರೈಲು ದುರಂತ ಸೇರಿದಂತೆ ಹಲವು ವಿಚಾರವಾಗಿ ವಿವಾದಾತ್ಮಕ ಟ್ವೀಟ್‌ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.