• Home  
  • ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ
- ಅಪರಾಧ - ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ

Share: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ  ಬೆಂಗಳೂರು,ಜು 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತು ಜಿಲ್ಲಾಡಳಿತದ ಕೈಯನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಟ್ಟಿಹಾಕಿದೆ. ಇದನ್ನು ಮುಚ್ಚಿಹಾಕಲು ಸರಕಾರ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.  ಮಲ್ಲೇಶ್ವರ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಸಿಐಡಿ ತನಿಖೆ ಅಥವಾ […]

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ

 ಬೆಂಗಳೂರು,ಜು 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತು ಜಿಲ್ಲಾಡಳಿತದ ಕೈಯನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಟ್ಟಿಹಾಕಿದೆ. ಇದನ್ನು ಮುಚ್ಚಿಹಾಕಲು ಸರಕಾರ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.

 ಮಲ್ಲೇಶ್ವರ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಸಿಐಡಿ ತನಿಖೆ ಅಥವಾ ಡಿಐಜಿ ಮಟ್ಟದ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ಮಾಡಬೇಕಿತ್ತು. ಆದರೆ, ಇದನ್ನು ಮುಚ್ಚಿಹಾಕುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.

 ಈ ಸಂಬಂಧ ಪ್ರತಿಭಟನೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಬಹಳ ದಿನಗಳ ಕಾಲ ಜನರನ್ನು ವಂಚಿಸಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಐಡಿಗೆ ಕೊಟ್ಟು ಕೂಲಂಕಷ ತನಿಖೆ ಮಾಡಿಸಿ. ಇದರ ಆರೋಪಿತರ ಸಮಗ್ರ ತನಿಖೆ ನಡೆಸಬೇಕು ಎಂದರು.

 ಇದರ ಹಿಂದೆ ಇರುವ ಜಾಲ, ಭಯೋತ್ಪಾದನೆ ತಂಡದ ಸಾಧ್ಯತೆ ಅಥವಾ ಲವ್ ಜಿಹಾದ್ ಪ್ರಕರಣದ ಸಾಧ್ಯತೆ ಕುರಿತು ಪರಿಶೀಲಿಸಬೇಕಿದೆ ಎಂದು ಆಗ್ರಹಿಸಿದರು.

ಪ್ರತ್ಯೇಕ ಸಿಐಡಿ ತಂಡ ರಚಿಸಿ ತನಿಖೆಗೆ ಆದೇಶ ಕೊಡಬೇಕು. ಆದರೆ, ಇದರ ಬದಲಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು, ಯುವಕರ ಮೇಲೆ ಕೇಸು ಹಾಕುವ ಕೆಟ್ಟ ಪರಂಪರೆಗೆ ನಮ್ಮ ಗೃಹ ಇಲಾಖೆ ಹೊರಟಿದೆ. ಇದು ಎಲ್ಲಿಗೆ ಮುಟ್ಟಲಿದೆ ಎಂಬ ಆತಂಕ ಮೂಡಿದೆ ಎಂದು ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.