• Home  
  • ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ; ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ‌
- ಅಪರಾಧ - ಕರಾವಳಿ

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ; ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ‌

Share: ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ; ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ  ಉಡುಪಿ: ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಖಂಡಿಸಿ ಹಾಗೂ  ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್‌  ಪ್ರತಿಭಟನೆ ಹಮ್ಮಿಕೊಂಡಿತು.  ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು.  ನಗರದ ಬಿಜೆಪಿ ಕಚೇರಿಯಿಂದ ಪ್ರಮುಖ ರಸ್ತೆ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ […]

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ; ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ

protest bjp

 ಉಡುಪಿ: ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಖಂಡಿಸಿ ಹಾಗೂ  ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್‌  ಪ್ರತಿಭಟನೆ ಹಮ್ಮಿಕೊಂಡಿತು.

 ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು.

 ನಗರದ ಬಿಜೆಪಿ ಕಚೇರಿಯಿಂದ ಪ್ರಮುಖ ರಸ್ತೆ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಕಚೇರಿ ಸುತ್ತಮುತ್ತ ಹಾಗೂ ಮೆರವಣಿಗೆ ಸಾಗುವ ರಸ್ತೆಯುದ್ಧಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಮಳೆಯನ್ನೂ ಲೆಕ್ಕಿಸದೆ ನೂರಾರು ಬಿಜೆಪಿ ಕಾರ್ಯಕರ್ತರು ಬನ್ನಂಜೆಯ ಎಸ್ಪಿ ಕಚೇರಿ ಮುಂದೆ ಜಮಾಯಿಸಿದರು.

 ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರು ಶಾಸಕ ಗಂಟಿಹೊಳಿ,  ಪ್ರತಿಭಟನಾ ಮೆರವಣಿಗೆಗಳಲ್ಲಿ ಭಾಗಿಯಾದರು.

ಎಸ್ಪಿ ಕಚೇರಿ ಮುಂದೆ ಮಾತನಾಡಿದ ಮುಖಂಡರು ,ಈ ಪ್ರಕರಣ ಸಣ್ಣ ಪ್ರಕರಣವೇನಲ್ಲ. ಇದರ ಹಿಂದೆ ಷಡ್ಯಂತ್ರ ಅಡಗಿದೆ. ರಾಜ್ಯ ಸರಕಾರ ಮುಕ್ತ ತನಿಖೆ ನಡೆಸಲು ಅವಕಾಶ ಕೊಡಬೇಕು. ಸಿದ್ದರಾಮಯ್ಯನವರ ಸರಕಾರದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯುವ ಸಂಶಯ ಇದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದರೆ ಈ ಪ್ರಕರಣದ ಸತ್ಯಾಂಶ ಹೊರಬರಲಿದೆ ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.