• Home  
  • ಉಳ್ಳಾಲ ಬಟ್ಟಪಾಡಿ ಕಡಲೊರೆತ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ, ಪರಿಶೀಲನೆ
- ಕರಾವಳಿ - ವಿಡಿಯೋ

ಉಳ್ಳಾಲ ಬಟ್ಟಪಾಡಿ ಕಡಲೊರೆತ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ, ಪರಿಶೀಲನೆ

Share: ಉಳ್ಳಾಲ ಬಟ್ಟಪಾಡಿ ಕಡಲೊರೆತ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ, ಪರಿಶೀಲನೆ  ಮಂಗಳೂರು: ಉಳ್ಳಾಲ ತಾಲೂಕಿನ ಬಟ್ಟಪಾಡಿ ಕಡಲೊರೆತ ಹಾನಿ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಪರಿಸ್ಥಿತಿ ಪರಿಶೀಲಿಸಿ, ಸ್ಥಳೀಯರು ಹಾಗೂ ಸಂತ್ರಸ್ತರ ಜತೆಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು.  ಈ ವೇಳೆ ಅವರು ಮಾತನಾಡಿ, ಕರಾವಳಿ ಪ್ರದೇಶದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಉಂಟಾಗುವ ಕಡಲೊರೆತ ಸಮಸ್ಯೆಗೆ ಶಾಸ್ವತ ಪರಿಹಾರ ಕಂಡು ಹಿಡಿಯುವ ಬಗ್ಗೆ ಚಿಂತನೆ […]

ಉಳ್ಳಾಲ ಬಟ್ಟಪಾಡಿ ಕಡಲೊರೆತ ಹಾನಿ ಪ್ರದೇಶಕ್ಕೆ ಸಿಎಂ ಭೇಟಿ, ಪರಿಶೀಲನೆ

cm visit dk kadalkoretha


 ಮಂಗಳೂರು: ಉಳ್ಳಾಲ ತಾಲೂಕಿನ ಬಟ್ಟಪಾಡಿ ಕಡಲೊರೆತ ಹಾನಿ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಪರಿಸ್ಥಿತಿ ಪರಿಶೀಲಿಸಿ, ಸ್ಥಳೀಯರು ಹಾಗೂ ಸಂತ್ರಸ್ತರ ಜತೆಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು.

 ಈ ವೇಳೆ ಅವರು ಮಾತನಾಡಿ, ಕರಾವಳಿ ಪ್ರದೇಶದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಉಂಟಾಗುವ ಕಡಲೊರೆತ ಸಮಸ್ಯೆಗೆ ಶಾಸ್ವತ ಪರಿಹಾರ ಕಂಡು ಹಿಡಿಯುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಸಂತ್ರಸ್ತರಿಗೆ ಜಿಲ್ಲಾಡಳಿತವು ಕೂಡಲೇ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಡಬೇಕು ಎಂದರು.

 ಸ್ವೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುತ್ತೈ ಮುಗಿಲನ್ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.