ಬೆಂಗಳೂರಿನ ಮಾರಿಯೆಟ್ ಹೋಟೆಲ್ ನಲ್ಲಿ ಸಿಎಂ ರಿಂದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ
ಬೆಂಗಳೂರು: ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಸಾಮಾಜಿಕ ಬದಲಾವಣೆಯಲ್ಲಿ ಶಿಕ್ಷಣ ಕುರಿತ ಸಿ.ಎಸ್.ಆರ್ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರುಗಳಾದ ಮಧು ಬಂಗಾರಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್, ಮುಖ್ಯಮಂತ್ರಿಗಳ ಸಲಹೆಗಾರರಾದ ಗೋವಿಂದರಾಜ್ ಉಪಸ್ಥಿತರಿದ್ದರು.

