• Home  
  •  ಆಳ್ವಾಸ್‌ ಮೂಡಬಿದ್ರಿಯಲ್ಲಿ  ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್‌, ವಿಚಾರ ಸಂಕಿರಣ ಮತ್ತು ಪ್ರದರ್ಶನ
- ಶಾಲಾ ಕಾಲೇಜು

 ಆಳ್ವಾಸ್‌ ಮೂಡಬಿದ್ರಿಯಲ್ಲಿ  ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್‌, ವಿಚಾರ ಸಂಕಿರಣ ಮತ್ತು ಪ್ರದರ್ಶನ

Share: ಆಳ್ವಾಸ್‌ ಮೂಡಬಿದ್ರಿಯಲ್ಲಿ  ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್‌, ವಿಚಾರ ಸಂಕಿರಣ ಮತ್ತು ಪ್ರದರ್ಶನ ಅಭಿವೃದ್ಧಿಗೆ ವಿದ್ಯಾರ್ಥಿ ಆವಿಷ್ಕಾರದ ಸದ್ಬಳಕೆ: ಆಳ್ವ  ಮೂಡುಬಿದಿರೆ: ಸ್ಥಳೀಯ ಹಾಗೂ ನೈಜ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳ ಆವಿಷ್ಕಾರಗಳನ್ನು ಪ್ರೋತ್ಸಾಹಿಸಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ) ಸಹಯೋಗದಲ್ಲಿ ಎರಡು ದಿನಗಳು (ಆ.೧೧ ಮತ್ತು ೧೨) ನಡೆಯಲಿರುವ ೪೬ನೇ […]

ಆಳ್ವಾಸ್‌ ಮೂಡಬಿದ್ರಿಯಲ್ಲಿ  ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್‌, ವಿಚಾರ ಸಂಕಿರಣ ಮತ್ತು ಪ್ರದರ್ಶನ

ಅಭಿವೃದ್ಧಿಗೆ ವಿದ್ಯಾರ್ಥಿ ಆವಿಷ್ಕಾರದ ಸದ್ಬಳಕೆ: ಆಳ್ವ

 ಮೂಡುಬಿದಿರೆ: ಸ್ಥಳೀಯ ಹಾಗೂ ನೈಜ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳ ಆವಿಷ್ಕಾರಗಳನ್ನು ಪ್ರೋತ್ಸಾಹಿಸಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ) ಸಹಯೋಗದಲ್ಲಿ ಎರಡು ದಿನಗಳು (ಆ.೧೧ ಮತ್ತು ೧೨) ನಡೆಯಲಿರುವ ೪೬ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್‌ ಗಳ ವಿಚಾರ ಸಂಕಿರಣ ಮತ್ತು ಪ್ರದರ್ಶನ’ದಲ್ಲಿ ಅವರು ಮಾತನಾಡಿದರು.

ಸ್ಥಳೀಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಯಿಂದ ವಿದ್ಯಾರ್ಥಿಗಳ ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ ಕೆಎಸ್‌ಸಿಎಸ್‌ಟಿ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳ ಜ್ಞಾನ ಮತ್ತು ತಾಂತ್ರಿಕ ನೈಪುಣ್ಯತೆಯನ್ನು ಗುರುತಿಸುವ ಕ್ರಮವು ಶಿಕ್ಷಣ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಮೌಲ್ಯಯುತವಾಗಿದೆ ಎಂದು ವಿಶ್ಲೇಷಿಸಿದರು. 

  ಕೆಎಸ್‌ಸಿಎಸ್‌ಟಿಯು ಕಳೆದ ೪೫ ವರ್ಷಗಳಲ್ಲಿ ೧೫,೩೦೦ಕ್ಕೂ ಹೆಚ್ಚು ಯೋಜನೆಗಳನ್ನು ಗುರುತಿಸಿ, ಸಹಾಧನ ನೀಡಿದೆ. ಈ ಸಾಲಿನಲ್ಲಿ ೧೯೭ ಎಂಜಿನಿಯರಿಂಗ್ ಕಾಲೇಜುಗಳಿಂದ ೫,೯೬೧ ಯೋಜನಾ ಪ್ರಸ್ತಾವ ಸ್ವೀಕರಿಸಿದ್ದು, ೧,೪೯೪ ಯೋಜನೆಗಳಿಗೆ ತಾಂತ್ರಿಕ ಹಾಗೂ ಧನ ಸಹಾಯ ನೀಡಿದೆ. ೪೩೩ ಅತ್ಯುತ್ತಮ ಯೋಜನೆಗಳು ಪ್ರದರ್ಶನಕ್ಕೆ ಆಯ್ಕೆಯಾಗಿವೆ ಎಂದರು.

  ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಇದು ವೈಜ್ಞಾನಿಕ ಯುಗ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸರ್ಕಾರ ಪ್ರೋತ್ಸಾಹಿಸುತ್ತದೆ. ದೇಶವು ಯುವ ಸಾಧಕರಿಂದ ತುಂಬಿದೆ ಎಂದು ಬಣ್ಣಿಸಿದರು.

ಎಲ್ಲ ಸ್ಪರ್ಧೆಗಳಲ್ಲಿ ಆಳ್ವಾಸ್ ಮುಂದಿರುತ್ತದೆ. ಇದು ಎಲ್ಲರಿಗೂ ಸವಾಲು ಎಂದರು.

ಕೆಎಸ್‌ಸಿಎಸ್‌ಟಿ ಕಾರ್ಯದರ್ಶಿ ಪ್ರೊ. ಅಶೋಕ ಎಂ. ರಾಯಚೂರ್ ಮಾತನಾಡಿ, ಕಾರ್ಯಕ್ರಮವು ೧೯೭೭ರಲ್ಲಿ ಆರಂಭವಾಗಿದ್ದು, ಈವರೆಗೆ ನಮಗೆ ೬೦ ಸಾವಿರಕ್ಕೂ ಅಧಿಕ ವಿದ್ಯಾರ್ಥಿ ಪ್ರಾಜೆಕ್ಟ್ ಬಂದಿವೆ. ವಿಶ್ವ ಹಾಗೂ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಬೆಂಬಲ ನೀಡುತ್ತಾ ಬಂದಿದ್ದೇವೆ ಎಂದರು.

ಎಸ್‌ಪಿಪಿ ವರದಿ ಹಾಗೂ ಸಿಡಿಯನ್ನು ಬಿಡುಗಡೆ ಮಾಡಲಾಯಿತು. ಆಳ್ವಾಸ್ ಎಂಜಿನಿಯರಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ಡಾ. ಸುಧೀರ್ ಶೆಟ್ಟಿ ಹಾಗೂ ಕೆಎಸ್‌ಸಿಎಸ್‌ಟಿಯ ಕೆ.ಎನ್. ವೆಂಕಟೇಶ್ ವೇದಿಕೆಯಲ್ಲಿದ್ದರು.

ಕೆಎಸ್‌ಸಿಎಸ್‌ಟಿ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ. ಯು.ಟಿ. ವಿಜಯ್ ಸ್ವಾಗತಿಸಿದರು. ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. 

ಪ್ರದರ್ಶನ:

ತಾಂತ್ರಿಕ ಪ್ರದರ್ಶನಗಳನ್ನು ಮಂಗಳೂರಿನ ಕರ್ನಾಟಕ ಥಿಯಾಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಹ್ಯೂಬರ್ಟ್ ಮನೋಹರ್ ವಾಟ್ಸನ್ ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹಾಗೂ ವಿವಿಧ ತಾಂತ್ರಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ವಿಜ್ಞಾನಿಗಳು ಇದ್ದರು.

೧೩೩ ಕಾಲೇಜುಗಳ ೭೧೨ ವಿದ್ಯಾರ್ಥಿಗಳು ಒಟ್ಟು ೩೬೮ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದರು. ೧೬೦ ಪ್ರಾಧ್ಯಾಪಕರು ಪಾಲ್ಗೊಂಡರು.

ಆಳ್ವಾಸ್ ಸಾಂಸ್ಕೃತಿಕ ತಂಡದಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಮುದ ನೀಡಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.