• Home  
  • ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ
- ಅಪರಾಧ

ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ

Share: ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ ಬೆಂಗಳೂರು: ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಗಾದೆ ಮಾತನ್ನು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ಕೇಳಿ ಬಂದಿದೆ. ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಬಳಸಿ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ. ಉಪೇಂದ್ರ ಅವರ […]

ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ

ಬೆಂಗಳೂರು: ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಗಾದೆ ಮಾತನ್ನು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ಕೇಳಿ ಬಂದಿದೆ.

ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಬಳಸಿ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ.

ಉಪೇಂದ್ರ ಅವರ  ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಉಪೇಂದ್ರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ದೀಪು ಗೌಡ್ರು ಎಂಬವರು ಈ ಕುರಿತು ಪ್ರತಿಕ್ರಿಯಿಸಿ,”ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು “ಹೊಲ್ಗೇರಿ”ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ? ಇಂತಹ ಕೆಟ್ಟ ಮನಸ್ಥಿತಿಗೆನೇ ನಾವು ಬ್ರಾಹ್ಮಣ್ಯ ಅಂತ ಉಗಿಯೋದು.. ಅಲ್ಲ್ರೀ ಸ್ವಾಮಿ ನಿಮಗೆ ನಿಜವಾಗಿಯೂ ಸಮಾಜದ ಮೇಲೆ ಕಾಳಜಿ ಇದಿದ್ದಿದ್ರೆ ಊರಿನಲ್ಲಿ ಹೊಲ್ಗೇರಿನೆ ಇರಬಾರದು ಅನ್ನೋ ಸಮಾನತೆಯ ಸಮಾಜದ ಬಗ್ಗೆ ಯೋಚನೆ ಮಾಡ್ತಿದ್ರಿ” ಎಂದು ಬರೆದಿದ್ದಾರೆ.

ಕರ್ನಾಟಕ ರಾಜ್ಯ ಭೀಮ್ ಆರ್ಮಿ ಅಧ್ಯಕ್ಷರಾದ ರಾಜಗೋಪಾಲ್. ಡಿ ಅವರು ಪ್ರತಿಕ್ರಿಯಿಸಿ, ಉಪೇಂದ್ರ ಅವರೆ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಹೇಳುವುದರ ಮೂಲಕ ನೀವು ದಲಿತರನ್ನು ಅಪಮಾನಿಸುತ್ತಾ ಇದ್ದೀರಿ. ಕೂಡಲೆ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೊಳ್ಳಬೇಕು ಮತ್ತೆ ಈ ದಲಿತ ಸಮಾಜದ ಕ್ಷಮೆ ಕೇಳಬೇಕು.

ಇಲ್ಲದಿದ್ದಲ್ಲಿ ನಿಮ್ಮ ವಿರುದ್ದ ಭೀಮ್ ಆರ್ಮಿ ಮತ್ತು ದಲಿತ ಸಂಘಟನೆಗಳಿಂದ ಹೋರಾಟ ಮಾಡಬೇಕಾಗುತ್ತದೆ. ಮತ್ತೆ ದೌರ್ಜನ್ಯ ಕಾಯ್ದೆ ಅಡಿ ನಿಮ್ಮ ಮೇಲೆ ಕೇಸು ದಾಖಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಉಪೇಂದ್ರ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪಣೆಯನ್ನು ಕೇಳಿದ್ದು, ಬಾಯಿ ತಪ್ಪಿನಿಂದ  ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗಳು ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲಿಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.