ಉಡುಪಿ: ಸಂಜೀವಿನಿ ಸೂಪರ್ ಮಾರ್ಕೆಟ್ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ, ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್, ಪ್ರಗತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಚೇರ್ಕಾಡಿ ಇವರ ಸಹಯೋಗದಲ್ಲಿ ಸಮೃದ್ಧಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಸದಸ್ಯರು
ನಗರದ ತಾಪಂ ಕಚೇರಿಯಲ್ಲಿ ಆರಂಭಿಸಿರುವ ಸಂಜೀವಿನಿ ಸೂಪರ್ ಮಾರ್ಕೆಟ್ ಉದ್ಘಾಟನಾ ಸಮಾರಂಭ ಇಂದು ನಡೆಯಿತು.
ಸಂಜೀವಿನಿ ಸೂಪರ್ ಮಾರ್ಕೆಟ್ ಅನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು. ಬಳಿಕ ಮಾರ್ಕೆಟ್ ಅನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
