• Home  
  • ಕೊರಗಜ್ಜನ ಆದಿ ಸ್ಥಳಕ್ಕೆ ನಟಿ ಪ್ರಿಯಾಂಕ ಉಪೇಂದ್ರ ಭೇಟಿ: ಪ್ರಾರ್ಥನೆ ಸಲ್ಲಿಕೆ
- ಕರಾವಳಿ

ಕೊರಗಜ್ಜನ ಆದಿ ಸ್ಥಳಕ್ಕೆ ನಟಿ ಪ್ರಿಯಾಂಕ ಉಪೇಂದ್ರ ಭೇಟಿ: ಪ್ರಾರ್ಥನೆ ಸಲ್ಲಿಕೆ

Share: ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ನಟಿ ಪ್ರಿಯಾಂಕ ಉಪೇಂದ್ರ ಭೇಟಿ – ಪೋಲಿಸ್ ಕೇಸ್ ಎದುರಿಸುತ್ತಿರುವ ಉಪೇಂದ್ರ ಪರವಾಗಿ ಪ್ರಾರ್ಥನೆ ಸಲ್ಲಿಕೆ  ಮಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀ‌ರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ […]

ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ನಟಿ ಪ್ರಿಯಾಂಕ ಉಪೇಂದ್ರ ಭೇಟಿ – ಪೋಲಿಸ್ ಕೇಸ್ ಎದುರಿಸುತ್ತಿರುವ ಉಪೇಂದ್ರ ಪರವಾಗಿ ಪ್ರಾರ್ಥನೆ ಸಲ್ಲಿಕೆ

 ಮಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀ‌ರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

 ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜನಿಗೆ ಜಿಲ್ಲೆ ಮಾತ್ರವಲ್ಲದೆ ದೇಶ, ವಿದೇಶಗಳಲ್ಲೂ ಅಸಂಖ್ಯಾತ ಭಕ್ತರಿದ್ದಾರೆ. ಹಾಗಾಗಿ ಸೆಲೆಬ್ರಿಟಿಗಳೂ ಇತ್ತೀಚಿನ ದಿವಸಗಳಲ್ಲಿ ಕೊರಗಜ್ಜನ ಆದಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಲ್ಲದೆ, ಇಷ್ಟಾರ್ಥ ನೆರವೇರಿಸುವಂತೆ ಹರಕೆಯನ್ನೂ ಹೊತ್ತು ತೆರಳುತ್ತಾರೆ.

 ನೂತನ ಸಿನೆಮಾ ಚಿತ್ರೀಕರಣಕ್ಕೆ ಬಂದಿದ್ದ ನಟಿ ಪ್ರಿಯಾಂಕ ಅವರು ಚಿತ್ರ ತಂಡದೊಂದಿಗೆ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ, ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ನಟಿ ಪ್ರಿಯಾಂಕರನ್ನು ಸನ್ಮಾನಿಸಿದರು.

 ಇತ್ತೀಚೆಗೆ ನಟಿ ಮಾಲಾಶ್ರೀ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ತನ್ನ ಇಷ್ಟಾರ್ಥ ಈಡೇರಿದ್ದಕ್ಕಾಗಿ ಹರಕೆ ಸಲ್ಲಿಸಿದ್ದರು.

 ಇದೀಗ ನಟಿ ಪ್ರಿಯಾಂಕ ಉಪೇಂದ್ರ ಕೊರಗಜ್ಜನಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಟ ಉಪೇಂದ್ರ ಅವರ  ಹೇಳಿಕೆಯಿಂದಾಗಿ ಕೆಲವರ  ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಪೊಲೀಸ್ ಕೇಸನ್ನೂ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಪತ್ನಿ ಪ್ರಿಯಾಂಕ ಬಂದು ಸಂಕಷ್ಟ ದೂರ ಮಾಡುವಂತೆ ಕೊರಗಜ್ಜನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.