• Home  
  • ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ
- ತಂತ್ರಜ್ಞಾನ

ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ

Share: ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ ಬಂಟ್ವಾಳ: ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಅವರು ತಿಳಿಸಿದರು.  ಅವರು  ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.  ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, […]

ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ

ಬಂಟ್ವಾಳ: ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಅವರು ತಿಳಿಸಿದರು.

 ಅವರು  ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

 ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ ವರ್ಷ 6ನೇ ಘಟಕ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪ್ರತಿ ವರ್ಷ 12.7 ಲಕ್ಷ ಮೆಟ್ರಿಕ್ ಟನ್  ಉತ್ಪಾದನೆ ಮಾಡುವ ಮೂಲಕ ದೇಶದ ಅಗತ್ಯದ ಯೂರಿಯಾ ಉತ್ಪಾದನೆಯ ಗುರಿ ಸಾಧನೆಯೊಂದಿಗೆ ಸ್ವಾವಲಂಬನೆ ಸಾಧ್ಯವಾಗಲಿದೆ. ಮುಂದಿನ ವರ್ಷ ಬೇಡಿಕೆ ಇರುವ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ರೈತರಿಗೆ ಒದಗಿಸಲಾಗುವುದು ಎಂದು ಭಗವಂತ ಖೂಬ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್, ಕೈಗಾರಿಕಾ ಇಲಾಖೆಯ ಅಧಿಕಾರಿಗಳು‌  ಹಾಗೂ ಸಂಬಂಧಿಸಿದವರು ಇದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.