ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್ ಉದ್ಘಾಟನೆ
ಉಡುಪಿ: ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9-30 ಕ್ಕೆ ನಡೆಯಲಿದೆ.
ಈ ಬಗ್ಗೆ ಈ ಮೀಡಿಯಾ ಗೆ ಸಮಗ್ರ ಮಾಹಿತಿಯನ್ನು ಡಾ. ದೇವಿಪ್ರಸಾದ್ ಶೆಟ್ಟಿ ನೀಡಿದರು.
