• Home  
  • ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ
- ರಾಜಕೀಯ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ

Share: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.  ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ […]

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈ  ಆದೇಶ

ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

 ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

 ಇಂದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂಪಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು 2019ರಲ್ಲಿ ಹೈಕೋರ್ಟ್ ನಲ್ಲಿ ಅವರ ವಿರುದ್ಧ ಅರ್ಜಿ ಸಲ್ಲಿಕೆಯಾಗಿತ್ತು.

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು. ಆದರೆ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದಲ್ಲಿ ಸೋಲು ಕಂಡ ಪರಾಜಿತ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು.

ಆದರೆ ಅವರ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ಆದೇಶದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.