• Home  
  • ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ
- ಕರಾವಳಿ - ಜೀವನಶೈಲಿ

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ

Share: ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ ಉಡುಪಿ: ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರು ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಂತರು, ಮುನಿಗಳು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.  ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ  ಕೇಮಾರು  ಸಾಂದೀಪನಿ ಸಾಧನಾಶಮದ ಶ್ರೀ ಈಶ ವಿಠಲದಾಸ  ಸ್ವಾಮೀಜಿಯವರು ತೀವ್ರವಾಗಿ ಖಂಡಿಸಿದ್ದಾರೆ.   ಸನಾತನ ಸಂಸ್ಕೃತಿಯ […]

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ

ಉಡುಪಿ: ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರು ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಂತರು, ಮುನಿಗಳು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

 ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ  ಕೇಮಾರು  ಸಾಂದೀಪನಿ ಸಾಧನಾಶಮದ ಶ್ರೀ ಈಶ ವಿಠಲದಾಸ  ಸ್ವಾಮೀಜಿಯವರು ತೀವ್ರವಾಗಿ ಖಂಡಿಸಿದ್ದಾರೆ.

  ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು.  ಸನಾತನ ಸಂಸ್ಕೃತಿ ಹಾಗೂ ಧರ್ಮದ ರಕ್ಷಣೆಗಾಗಿ ಲಕ್ಷೋಪಲಕ್ಷ ಸಾಧು ಸಂತರು ತಪಸ್ಸಿನ ಮೂಲಕ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸನಾತನ ಪರಂಪರೆ, ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವ ಕೆಲಸವನ್ನು ಮಾಡಿದ್ದಾರೆ. ಈ ಮಣ್ಣಿನ ಮೂಲ ಧರ್ಮ, ಸಂಸ್ಕೃತಿ, ಜೀವನ ವಿಧಾನವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬಾಲ್ಯದಿಂದಲೇ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಕಲಿಸಬೇಕು ಎಂದು ಕೇಮಾರು ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.