ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಭಾರತೀಯ ಯೋಧ ಸಾವು
ಬೆಳಗಾವಿ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ತಡರಾತ್ರಿ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷಣ ಮೃತ ದುರ್ದೈವಿ.
ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ರಜೆ ಹಿನ್ನಲೆಯಲ್ಲಿ ಸ್ವ ಗ್ರಾಮಕ್ಕೆ ಆಗಮಿಸಿದ್ದರು.
ಬೈಕ್ ನಲ್ಲಿ ತೆರಳುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಹ ಸವಾರ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತ ಯೋಧನ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಿತು.

