• Home  
  • ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ
- ಅಪರಾಧ

ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ

Share: ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿರುವ Aaj Tak ವಾಹಿನಿ ಮತ್ತು ನಿರೂಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ. ಬಿಜೆಪಿ ಸಂಸದರು ಮೊದಲು ಈ ರೀತಿ ಸುಳ್ಳು ಹೇಳುವುದನ್ನು ಪ್ರಾರಂಭಿಸಿದ್ದರು. ಇದೀಗ ಮಾಧ್ಯಮಗಳು ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಇದು ಉದ್ದೇಶಪೂರ್ವಕ […]

ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿರುವ Aaj Tak ವಾಹಿನಿ ಮತ್ತು ನಿರೂಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ ಸಂಸದರು ಮೊದಲು ಈ ರೀತಿ ಸುಳ್ಳು ಹೇಳುವುದನ್ನು ಪ್ರಾರಂಭಿಸಿದ್ದರು. ಇದೀಗ ಮಾಧ್ಯಮಗಳು ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಇದು ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತವಾಗಿದ್ದು, ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Aaj Tak ಪತ್ರಕರ್ತ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದಾರೆ. Aaj Tak ವರದಿಯಲ್ಲಿ ಕರ್ನಾಟಕದಲ್ಲಿ ಅಲ್ಪಸಂಖ್ಯಾತರಿಗೆ ಸಬ್ಸಿಡಿ ನೀಡಿದ್ದು, ಹಿಂದೂಗಳಿಗೆ ಇಲ್ಲ ಎಂದು ವರದಿಗೆ ತಲೆ ಬರಹವನ್ನು ನೀಡಿತ್ತು.

ವರದಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಬಡ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಮಾತ್ರ ಆಟೋರಿಕ್ಷಾ ಅಥವಾ ಟ್ಯಾಕ್ಸಿ ಖರೀದಿಯಲ್ಲಿ 50% ಸಬ್ಸಿಡಿ ನೀಡುತ್ತದೆ. ಕರ್ನಾಟಕದಲ್ಲಿ ಯಾರಾದರೂ ಅಲ್ಪಸಂಖ್ಯಾತ ಸಮುದಾಯದವರಲ್ಲದ ಬಹುಸಂಖ್ಯಾತ ಸಮಾಜದಲ್ಲಿ ಜನ್ಮ ಪಡೆದರೆ ಅವರು ಎಷ್ಟೆ ಬಡವರಾಗಿದ್ದರೂ ಅವರಿಗೆ ಸಿಗುವುದಿಲ್ಲ. ಈ ಯೋಜನೆ ಹಿಂದೂಗಳಿಗೆ ಇಲ್ಲ. ಅವರೆಷ್ಟೇ ಬಡವರೇ ಆಗಿರಲಿ, ಅವರ ಬಳಿ ಹಣವೇ ಇಲ್ಲದಿರಲಿ,  ಅವರಿಗೆ ಸಬ್ಸಿಡಿ ಸಿಗುವುದಿಲ್ಲ. ಆದರೆ ಯೋಜನೆಯಲ್ಲಿ ಇತರ ಮುಸ್ಲಿಂ, ಬೌದ್ಧ ,ಜೈನ ಇತರ ಅಲ್ಪಸಂಖ್ಯಾತರಿಗೆ 50% ಸಬ್ಸಿಡಿ ನೀಡಲಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ಕಾರ್ಯಕ್ರಮದಿಂದ ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮಾತ್ರ ಪ್ರಯೋಜನವಾಗಿದೆ ಎಂದು ಅವರ ವರದಿ ಹೇಳಿದೆ. ಆದರೆ ಇದು ಸುಳ್ಳಾಗಿದೆ. ಈ ಕಾರ್ಯಕ್ರಮವು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸದಸ್ಯರಿಗೂ ಲಭ್ಯವಿದೆ ಎಂಬುವುದನ್ನು ಇಲಾಖೆಯ ವೆಬ್‌ಸೈಟ್ ನಲ್ಲಿ ತಿಳಿಸಲಾಗಿದೆ.

ಕರ್ನಾಟಕ ಸ್ವಾವಲಂಬಿ ಸಾರಥಿ ಯೋಜನೆ 2023ರ ಪ್ರಕಾರ ಯೋಜನೆಯು ಅಲ್ಪಸಂಖ್ಯಾತರಿಗೆ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸದಸ್ಯರಿಗೆ 4 ಲಕ್ಷ ಸಬ್ಸಿಡಿ ಸಿಗಲಿದೆ.

ಸ್ವಾವಲಂಬಿ ಸಾರಥಿ ಯೋಜನೆಯನ್ನು ಕರ್ನಾಟಕ ಸರ್ಕಾರವು ರಾಜ್ಯದ ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ಪ್ರಾರಂಭಿಸಿದೆ. ರಾಜ್ಯದ ನಿರುದ್ಯೋಗಿ ಯುವಕರು ಈ ಕಾರ್ಯಕ್ರಮದಡಿಯಲ್ಲಿ ನಾಲ್ಕು ಚಕ್ರಗಳ ವಾಹನಗಳ ಖರೀದಿಗೆ 50% ರಿಂದ 75% ವರೆಗೆ ಸಹಾಯಧನವನ್ನು ನೀಡಲಿದೆ. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ನೇರ ಠೇವಣಿ ಮೂಲಕ ಈ ಮೊತ್ತವನ್ನು ಪಡೆಯುತ್ತಾರೆ. ಸ್ವಾವಲಂಬಿ ಸಾರಥಿ ಯೋಜನೆಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.