• Home  
  • ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ 
- ಅಪರಾಧ

ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ 

Share: ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ  ಬಂಟ್ವಾಳ: ಕಳವು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಎಂಬವರ ಪುತ್ರ ಮಹಮ್ಮದ್ ಶಾಫಿ ಬಂಧಿತ ಆರೋಪಿಯಾಗಿದ್ದಾನೆ. 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳವು ಪ್ರಕರಣಗಳಿದ್ದು, […]

ಬಂಟ್ವಾಳ ಕಳವು ಪ್ರಕರಣ : 9 ವರ್ಷದಿಂದ ತಲೆಮರೆಸಿದ್ದ ಆರೋಪಿಯ ಬಂಧನ 

ಬಂಟ್ವಾಳ: ಕಳವು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಎಂಬವರ ಪುತ್ರ ಮಹಮ್ಮದ್ ಶಾಫಿ ಬಂಧಿತ ಆರೋಪಿಯಾಗಿದ್ದಾನೆ.

2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳವು ಪ್ರಕರಣಗಳಿದ್ದು, ಅ ಪ್ರಕರಣದಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

  ಬಂಟ್ವಾಳ ನಗರ , ವಿಟ್ಲ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೋಣಾಜೆ ಪೋಲೀಸ್ ಠಾಣೆಯಲ್ಲಿ ಈತನ ವಿರುದ್ಧ‌ ಕಳ್ಳತನ  ಪ್ರಕರಣಗಳಿದೆಯೆನ್ನಲಾಗಿದೆ.

ಖಚಿತ ಮಾಹಿತಿಯನ್ವಯ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್‌ಅವರ ನಿರ್ದೇಶನದಂತೆ ಉಪನಿರೀಕ್ಷಕರಾದ ಹರೀಶ್ ಮತ್ತು ಮೂರ್ತಿ ಮತ್ತವರ ಸಿಬ್ಬಂದಿಗಳು  ಪುತ್ತೂರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

Leave a comment

Your email address will not be published. Required fields are marked *

eMedia Kannada  @2025. All Rights Reserved.