• Home  
  • ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ  
- ರಾಜಕೀಯ

ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ  

Share: ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ    ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಸೇರಿ ರಾಜ್ಯದೆಲ್ಲೆಡೆ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಹಲವೆಡೆ ಕಾವೇರಿ ನದಿ ನೀರು […]

ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ  

 ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

 ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಸೇರಿ ರಾಜ್ಯದೆಲ್ಲೆಡೆ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಹಲವೆಡೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘ, ಕರವೇ, ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಕಾರ್ಯಕರ್ತರು ಉರುಳುಸೇವೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೆಂಬಲ ಸೂಚಿಸಿದ್ದು, ಈ ಹೋರಾಟದಲ್ಲಿ ಸ್ಯಾಂಡಲ್ ವುಡ್ ನ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದಾರೆ.

ಚಿಕ್ಕಮಗಳೂರು ನಗರದ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ಒಂದು ಕಡೆ ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ತಲೆ ಮೇಲೆ ಖಾಲಿ ಕೊಡ ಹೊತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಂಗಡಿ, ಮಳಿಗೆ, ಹೋಟೆಲ್, ಸಿನಿಮಾ ಮಂದಿರ ಬಾಗಿಲು ತೆರೆದಿಲ್ಲ. ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಆದರೆ, ಸಾರಿಗೆ ವ್ಯತ್ಯಯದಿಂದ ತೊಂದರೆ ಉಂಟಾಗಿದೆ. ವಾಹನಗಳನ್ನು ಪ್ರತಿಭಟನಕಾರರು ಅಡ್ಡ ಹಾಕುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೂ ಕಡಿಮೆ ಸಂಖ್ಯೆಯಲ್ಲಿದ್ದಾರೆ, ಬಸ್‌ಗಳೂ ಇಲ್ಲ.

ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಎಲ್ಲೆಡೆ ಆಕ್ರೋಶ ಕಂಡುಬರುತ್ತಿದೆ. ಚಿತ್ರದುರ್ಗದಲ್ಲಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿದ್ದಾರೆ. ಸಿಎಂ ಸ್ಟಾಲಿನ್ ಅಣಕು ತಿಥಿ ಮಾಡಿದ್ದಾರೆ. ಹಲವೆಡೆ ರಸ್ತೆ ತಡೆಯಂತಹ ಪ್ರತಿಭಟನೆಗಳು ನಡೆಯುತ್ತಿವೆ.

ಕರ್ನಾಟಕ ಬಂದ್‌ಗೆ ಭಾರೀ ಬೆಂಬಲ, ಅಲ್ಲಲ್ಲಿ ರಸ್ತೆ ತಡೆ, ಬಸ್, ವಿಮಾನ ಸಂಚಾರದಲ್ಲಿ ವ್ಯತ್ಯಯ

ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.