• Home  
  • ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ
- ಕರಾವಳಿ

ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

Share: ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ  ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.  ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು 01 ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ […]

ಕರಾವಳಿಯಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

 ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

 ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು 01 ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ

ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ 65ಕಿ.ಮೀ ವರೆಗೆ ಬಿರುಗಾಳಿ ಬೀಸಬಹುದು ಎಂದು ತಿಳಿಸಿದೆ. 

 ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ.

 ಸಾರ್ವಜನಿಕರು ನದಿ/ನೀರಿರುವ ಪ್ರದೇಶ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ ಮರಗಳ ಹತ್ತಿರ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.