• Home  
  • ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ
- ಕರಾವಳಿ - ಮನೋರಂಜನೆ

ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ

Share: ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ ಕಾರಂತರ ಹೆಸರಿನಲ್ಲಿ ಪ್ರಶಸ್ತಿ ಜ್ಞಾನಪೀಠದಷ್ಟೆ ಶ್ರೇಷ್ಠತೆಯನ್ನು ಹೊಂದಿದೆ – ಡಾ.ವಿದ್ಯಾಭೂಷಣ ಕೋಟ:  ಕಾರಂತರ ಜೀವನದ ತಳಹದಿ ಬಹುವೈಶಿಷ್ಟತೆಯಿಂದ ಕೂಡಿದೆ. ಅಂತಹ ಮಹಾನ್ ಸಾಧಕನ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವುದು ದೊಡ್ಡಭಾಗ್ಯ ಎಂದು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪುರಸ್ಕೃತ ಡಾ. ವಿದ್ಯಾಭೂಷಣ್ ರವರು ಹೇಳಿದರು. ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಂಗಳವಾರ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ […]

ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರಧಾನ

ಕಾರಂತರ ಹೆಸರಿನಲ್ಲಿ ಪ್ರಶಸ್ತಿ ಜ್ಞಾನಪೀಠದಷ್ಟೆ ಶ್ರೇಷ್ಠತೆಯನ್ನು ಹೊಂದಿದೆಡಾ.ವಿದ್ಯಾಭೂಷಣ

ಕೋಟ:  ಕಾರಂತರ ಜೀವನದ ತಳಹದಿ ಬಹುವೈಶಿಷ್ಟತೆಯಿಂದ ಕೂಡಿದೆ. ಅಂತಹ ಮಹಾನ್ ಸಾಧಕನ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವುದು ದೊಡ್ಡಭಾಗ್ಯ ಎಂದು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪುರಸ್ಕೃತ ಡಾ. ವಿದ್ಯಾಭೂಷಣ್ ರವರು ಹೇಳಿದರು.

ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಮಂಗಳವಾರ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ  ಹುಟ್ಟೂರ ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್‌ಚಂದ್ ಗೇಹಲೋಟ್ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಪ್ರಧಾನಿಸಿದರು.

ಸನ್ಮಾನ ಸ್ವೀಕರಿಸಿದ ಡಾ. ವಿದ್ಯಾಭೂಷನ್‌ ಮಾತನಾಡಿ, ಇದು ಬಯಸದೇ ಬಂದ ಭಾಗ್ಯ. ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗಬಾರದು. ಅದು ನಮ್ಮನ್ನು ಅರಸಿಕೊಂಡು ಬರಬೇಕು ಎಂದು ತಾನು ಈವರೆಗೆ ಯಾವುದೇ ಪ್ರಶಸ್ತಿ , ಸನ್ಮಾನದ ಬಗ್ಗೆ ಯೋಚಿಸದವನಲ್ಲ. ಆದರೆ ಕಾರಂತರ ಹೆಸರಿನಲ್ಲಿ ಪ್ರಶಸ್ತಿ ಜ್ಞಾನಪೀಠದಷ್ಟೆ ಶ್ರೇಷ್ಠತೆಯನ್ನು ಹೊಂದಿದೆ. ಇಲ್ಲಿನ ಕಾರಂತ ಥೀಂ ಪಾಕ್೯ ಸೊಬಗು ಕಣ್ಣುಗಳಿಂದ ಅಳೆಯಲು ಸಾಧ್ಯವಿಲ್ಲ. ಅಂತಹ ವಿಶೇಷತೆ ಇಲ್ಲಿ ಇದೆ. ಇದೊಂದು ಮುಂದಿನ ಜನಾಂಗಕ್ಕೆ ಕಾರಂತರನ್ನು ಪರಿಚಯಿಸುವಂತೆ ಮಾಡಿದೆ. ಕಾರಂತರ ಬದುಕು ಇತರರಿಗೆ ಸ್ಪೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

 ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೇಹಲೋಟ್‌ರವರಿಗೆ ಕರಾವಳಿಯ ಗಂಡುಕಲೆ ಯಕ್ಷ ಕೀರಿಟ ಧರಿಸಿ ಗೌರವಿಸಲಾಯಿತು.

ಗಾಂಧಿ ಪುರಸ್ಕಾರ ಪಡೆದ ಹಲವು ಗ್ರಾಮಪಂಚಾಯತ್ ಗಳನ್ನು ಗುರುತಿಸಿ ಅಭಿನಂದಿಸಲಾಯಿತು.

ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು.

ಈ ಮೊದಲು ಕಾರಂತ ಪುತ್ಥಳಿಗೆ ರಾಜ್ಯಪಾಲರು ಮಾಲಾರ್ಪಣೆಗೈದು, ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯುವ ವಿವಿಧ ಕಲಾ ಚಟುವಟಿಕೆಗಳನ್ನು ವೀಕ್ಷಿಸಿದರು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ , ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಎ.ಸಿ ರಶ್ಮಿ, ತಹಶೀಲ್ದಾರ್ ಶೋಭಾಲಕ್ಷ್ಮೀ, ಬ್ರಹ್ಮಾವರ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್ ವಿ ಇಬ್ರಾಹಿಂಪುರ್, ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಪ್ರತಿಷ್ಠಾನದ ಸದಸ್ಯ ಯು. ಎಸ್ ಶೆಣೈ ಇದ್ದರು.

ಕಾರಂತ ಹುಟ್ಟೂರ ಪ್ರಶಸ್ತಿ ರೂವಾರಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು.

ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸದಸ್ಯ ಸತೀಶ್ ವಡ್ಡರ್ಸೆ ನಿರೂಪಿಸಿದರು. ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ವಂದಿಸಿದರು.

ರಾಜ್ಯದ ರಾಜ್ಯಪಾಲ ಥಾವರ್ಚಂದ್ ಗೇಹಲೋಟ್ ಮಾತು

ಕಾರಂತರ ಸಾಹಿತ್ಯ, ಕಲೆ, ಸಂಸ್ಕೃತಿಯ ಅನಾವರಣ ಕಾರಂತ ಥೀಂ ಪಾರ್ಕ್ ಮೂಲಕ ಯುವ ಸಮೂಹವನ್ನು ತಲುಪುತ್ತಿದೆ.

 ಕಾರಂತರು ಗಾಂಧೀಜಿ ಸಿದ್ಧಾಂತದ ಅನುಯಾಯಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿಯನ್ನು ಹಿಂದೆ ನೀಡಿದ ಮಹಾನ್ ವ್ಯಕ್ತಿ, ವಿಶ್ವಕೋಶ ಎಂದೇ ಖ್ಯಾತಿಯಾದ ಕಾರಂತರು ಆಧುನಿಕ ಠ್ಯಾಗೋರ್ ಎಂದೇ ಪ್ರಸಿದ್ಧರಾಗಿದ್ದರು ಎಂದು ಹೇಳಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.