(mangaluru beach) ಕಡಲ ತೀರದಲ್ಲಿ ಬೆಂಗಳೂರು (Bengaluru)ಮೂಲದ ಇಬ್ಬರ ಸಾವು ; ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಆತ್ಮಹತ್ಯೆ ಶಂಕೆ (suicide)
(mangaluru) ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು, ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮಂಗಳೂರು, ಅ.19: ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯ ವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತರು. ಇವರು ಬೆಂಗಳೂರು ನಿವಾಸಿಗಳಾಗಿದ್ದು, ಮನೆಯಲ್ಲಿ ಹೇಳದೇ ತೆರಳಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ನಿನ್ನೆ (Bengaluru)ಬೆಂಗಳೂರಿನಿಂದ ಆಗಮಿಸಿದ್ದು ಇಂದು ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಇವರ ನಡುವೆ ಯಾವ ರೀತಿಯ ಸಂಬಂಧ ಇತ್ತು ಎನ್ನುವ ಮಾಹಿತಿ ಇಲ್ಲ. ಸಂಬಂಧಿಕರು ಸುದ್ದಿ ಕೇಳಿ ಶಾಕ್ ಆಗಿದ್ದು, ಮಂಗಳೂರಿಗೆ ಬರುತ್ತಿದ್ದಾರೆ.
ಮೊಬೈಲ್ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ.
ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಶವಗಳನ್ನು ಸ್ಥಳೀಯರು ಮೇಲೆತ್ತಿದ್ದು, ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ.

