ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವ ಪ್ರಸ್ತಾವನೆಗೆ ಸರಕಾರ ಅಸ್ತು (DK Shivkumar)
(Bengaluru)ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.
ಸಿಎಂ ಸಿದ್ದರಾಮಯ್ಯ(cm siddaramayya) ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ (HK Patil) ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ (Prabhulinga Navadagi) ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ (Present AG General Shashikiran Shetty)ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ.
ಕೋರ್ಟ್‌ನಲ್ಲಿ ಸಿಬಿಐ ಪ್ರಕರಣದ ವಿಚಾರಣೆ ಬಾಕಿ ಇದೆ. ಹೀಗಾಗಿ ಕೇವಲ ತನಿಖೆಗೆ ಸಿಬಿಐಗೆ ನೀಡಿರುವ ಅನುಮತಿ ಮಾತ್ರ ಹಿಂಪಡೆಯುವುದಕ್ಕೆ ಸರ್ಕಾರಕ್ಕೆ ಸಾಧ್ಯತೆ ಇದೆ.

