ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ನಿವಾಸಕ್ಕೆ ಸಿಎಂ ಭೇಟಿ, ಆರೋಗ್ಯ ವಿಚಾರಣೆ
ನೆಲಮಂಗಲ ಡಿ. 03: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ಸೋಲದೇವನಹಳ್ಳಿ ಯಲ್ಲಿರುವ ಮನೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddarammayya) ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಲೀಲಾವತಿಯವರ ಪುತ್ರ ವಿನೋದ್ ರಾಜ್ (vinod Raj) ಮತ್ತು ಲೀಲಾವತಿಯವರ ಕುಟುಂಬಿಕರು ಉಪಸ್ಥಿತರಿದ್ದರು.

