ಓಮನ್ ಬಿಲ್ಲವಾಸ್ ವತಿಯಿಂದ ‘ವ್ಯವಹಾರ ಸಂಪರ್ಕ’ ಕಾರ್ಯಕ್ರಮ

(Maskat) ಮಸ್ಕತ್: ಓಮನ್ ಬಿಲ್ಲವಾಸ್ (Oman Billawas) ಆಯೋಜನೆಯಲ್ಲಿ ‘ವ್ಯವಹಾರ ಸಂಪರ್ಕ‘ ಶೀರ್ಷಿಕೆಯಡಿಯಲ್ಲಿ ಬಿಲ್ಲವ ಬಾಂಧವರನ್ನು ಆರ್ಥಿಕವಾಗಿ ಸ್ವಾವಲಂಬಿತರನ್ನಾಗಿಸುವ ಹಾಗೂ ಪರಸ್ಪರ ವ್ಯಾವಹಾರಿಕ ಬೆಂಬಲವನ್ನು ವೃದ್ಧಿಪಡಿಸುವ ತರಬೇತಿ ಕಾರ್ಯಾಗಾರ ಮಸ್ಕತ್ ನ ಅಜ್ಹೈಭ ಗಾರ್ಡನ್ ಹಾಲ್ ನಲ್ಲಿ ಆಯೋಜಿಸಲಾಯಿತು.
ವ್ಯಾವಹಾರಿಕವಾಗಿ ಒಬ್ಬರನ್ನೊಬ್ಬರು ಬೆಂಬಲಿಸುತ್ತಾ, ಸಮಾಜದಲ್ಲಿ ತಾನು ಬೆಳೆದು ಇತರರನ್ನು ಬೆಳೆಸುವ ಹಾಗೂ ಆರ್ಥಿಕವಾಗಿ ಸದೃಢರಾಗಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮ ಇದಾಗಿದೆ.
ಕಾರ್ಯಕ್ರಮದಲ್ಲಿ ಸಮುದಾಯದ ಹಿರಿಯ ಉದ್ಯಮಿಗಳು, ಸ್ವಉದ್ಯೋಗಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ತಮ್ಮ ವ್ಯಾವಹಾರಿಕ ಅನುಭವನ್ನು ಹಂಚಿಕೊಂಡರು. ಮತ್ತು ಯಶಸ್ವೀ ಉದ್ಯಮಿಗಳಾಗುವಲ್ಲಿ ಪರಿಪಾಲಿಸಬೇಕಾದ ಸೂಕ್ಷ್ಮ ವಿಚಾರಗಳನ್ನು ತಿಳಿ ಹೇಳಿದರು.
ಅಧ್ಯಕ್ಷ ಶ್ರೀ ಸುಜಿತ್ ಅಂಚನ್ ಮಾತನಾಡಿ, ಸಂಘಟನಾತ್ಮಕ ಚಟುವಟಿಕೆಗಳು ಹಾಗೂ ಮುಂಬರುವ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾಪಿಸಿದರು.
ಸ್ಥಾಪಕ ಸದಸ್ಯ ಹಾಗೂ ಮಾಜಿ ಅಧ್ಯಕ್ಷ Dr. ಅಂಚನ್ ಸಿ. ಕೆ (DR ANCHAN CK )ದಿಕ್ಸೂಚಿ ಭಾಷಣ ನೀಡಿದರು.
ಕಾರ್ಯಕಾರಿ ಸಮಿತಿ ಹಾಗೂ ಸದಸ್ಯರು ಭಾಗವಹಿಸಿದ್ದರು.
ಶ್ರೀ ಹರೀಶ್ ಸುವರ್ಣ ಸ್ವಾಗತಿಸಿದರು. ಶ್ರೀ ಕೃಷ್ಣ ಪ್ರಸಾದ್ ಮತ್ತು ಸುರೇಂದ್ರ ಅಮೀನ್ ಕಾರ್ಯಕ್ರಮದ ಪ್ರಸ್ತಾವನೆ ಗೈದರು.
ಶ್ರೀ ಉಮೇಶ್ ಜೆಪ್ಪು ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಂದನ ರಾಮಕೃಷ್ಣ ರವರು ಸರ್ವರನ್ನು ವಂದಿಸಿದರು.

