ಮಲ್ಪೆಯಲ್ಲಿ ಸ್ಕೂಟಿ ಸಮೇತ ಬಂದರಿನ ನೀರಿಗೆ ಬಿದ್ದ ಮೀನುಗಾರ ; ಈಶ್ವರ್ ಮಲ್ಪೆ ಅವರಿಂದ ಕಾರ್ಯಾಚರಣೆ
(Malpe) ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಮೀನುಗಾರನೊಬ್ಬ ಸ್ಕೂಟಿ ಸಮೇತ ದಕ್ಕೆ ಬಳಿಯ ನೀರಿಗೆ ಬಿದ್ದ ಘಟನೆ ಸಂಭವಿಸಿದ್ದು,ಆಪದ್ಭಾಂಧವ ಈಶ್ವರ್ ಮಲ್ಪೆ ಅವರಿಂದ ಕಾರ್ಯಾಚರಣೆ ನಡೆದಿದ್ದು, ಮೀನುಗಾರನ ಮೃತದೇಹ ಪತ್ತೆ ಆಗಿದೆ.
ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು.
ನೀರಿಗೆ ಬಿದ್ದ ಮಾಹಿತಿ ತಿಳಿದು ತತ್‌ಕ್ಷಣ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಕ್ಕಿರಲಿಲ್ಲ. ಅದರೆ ಆತನ ಸ್ಕೂಟರ್ ಪತ್ತೆಯಾಗಿದ್ದು, ಹಗ್ಗದ ಸಹಾಯದಿಂದ ಮೇಲಕ್ಕೆತ್ತಲಾಯಿತು.
ಇಂದು ಮೀನುಗಾರನ ಮೃತದೇಹ ಪತ್ತೆಯಾಗಿದ್ದು, ಶವವನ್ನು ಮೇಲಕ್ಕೆತ್ತಲಾಯಿತು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

