• Home  
  • ಉಡುಪಿ ಬನ್ನಂಜೆ ಬಿಲ್ಲವ ಸಂಘದ ವಿರುದ್ಧ ನಿಂದನೆ: ಕಿಡಿಗೇಡಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ (Abuse against Bannanje Billava Sangha; Pitition to Udupi SP to demanding to take action)
- ಅಪರಾಧ - ವಿಡಿಯೋ

ಉಡುಪಿ ಬನ್ನಂಜೆ ಬಿಲ್ಲವ ಸಂಘದ ವಿರುದ್ಧ ನಿಂದನೆ: ಕಿಡಿಗೇಡಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ (Abuse against Bannanje Billava Sangha; Pitition to Udupi SP to demanding to take action)

Share: ಉಡುಪಿ ಬನ್ನಂಜೆ ಬಿಲ್ಲವ ಸಂಘದ ವಿರುದ್ಧ ನಿಂದನೆ: ಕಿಡಿಗೇಡಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ  ಉಡುಪಿ; ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲ ಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣ ಗಳಲ್ಲಿ ವಿಡಿಯೋ ವೈರಲ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳುವಂತೆ ಆಗ್ರಹಿಸಿ ಸಂಘದ ನಿಯೋಗ ಬುಧವಾರ ಉಡುಪಿ ಜಿಲ್ಲಾ ಪೊಲೀಸ್ […]

ಉಡುಪಿ ಬನ್ನಂಜೆ ಬಿಲ್ಲವ ಸಂಘದ ವಿರುದ್ಧ ನಿಂದನೆ: ಕಿಡಿಗೇಡಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

 ಉಡುಪಿ; ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲ ಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣ ಗಳಲ್ಲಿ ವಿಡಿಯೋ ವೈರಲ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳುವಂತೆ ಆಗ್ರಹಿಸಿ ಸಂಘದ ನಿಯೋಗ ಬುಧವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ. ಅರುಣ್ (Udupi SP DR Arunkumar)ಅವರಿಗೆ ಮನವಿ ಸಲ್ಲಿಸಿದೆ.

ಬಿಲ್ಲವ ಸಮಾಜದ ಘನವೆತ್ತ ಸಂಸ್ಥೆಗಳಲ್ಲಿ ಮುಖ್ಯವಾಗಿರುವ ಉಡುಪಿ ಬಿಲ್ಲವ ಸೇವಾ ಸಂಘದ ಕುರಿತು ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ. ಇದು ಸಂಘಕ್ಕೆ ಅಪವಾದವಾಗಿದ್ದು, ಇದನ್ನು ಇಡೀ ಸಮಾಜ ಒಕ್ಕೊರಲಿನಿಂದ ಖಂಡಿಸುತ್ತದೆ.

 ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಿತ್ಯ ಪೂಜೆ ಹಾಗೂ ವಿಶೇಷ ಸೇವೆಗಳು ನಡೆಯುತ್ತಿದ್ದು, ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಅಂಗವಾಗಿ ಜ.22ರಂದು ಮಂದಿರದಲ್ಲಿ ಪೂಜೆ ನಡೆಸಲಾಗಿದೆ. ಆದರೆ ಪೂರ್ವಾಗ್ರಹ ಪೀಡಿತ ವ್ಯಕ್ತಿಯೊಬ್ಬ ಸಂಘದ ಹಿತಾಸಕ್ತಿಗೆ ಧಕ್ಕೆ ತರುವ ಉದ್ದೇಶದಿಂದ ಅವಾಚ್ಯವಾಗಿ ನಿಂದಿಸಿ ವಿಡಿಯೋ ವೈರಲ್‌ ಮಾಡಿದ್ದಾನೆ.

 ತಪ್ಪಿತಸ್ಥ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಯಲ್ಲಿ ಒತ್ತಾಯಿಸಲಾಯಿತು.

 ನಿಯೋಗದಲ್ಲಿ ಬನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ (Madhva Bannanje), ಕಾರ್ಯದರ್ಶಿ ಶಶಿಧರ್ ಎಂ. ಅಮೀನ್, ಕೋಶಾಧಿಕಾರಿ ಗೋಪಾಲ ಪೂಜಾರಿ, ಮುಖಂಡರಾದ ಆನಂದ ಪೂಜಾರಿ ಕಿದಿಯೂರು, ಕೃಷ್ಣ ಅಂಚನ್, ಉದಯ ಪೂಜಾರಿ ಕಲ್ಯಾಣಪುರ, ಪೂರ್ಣಿಮಾ ಎಸ್. ಅಂಚನ್, ಗಿರಿರಾಜ್ ಪೂಜಾರಿ, ರಾಜು ಪೂಜಾರಿ ಉಪ್ಪೂರು, ಗಣೇಶ್ ಕೋಟ್ಯಾನ್ ಗುಂಡಿಬೈಲು, ಗೋವರ್ಧನ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.