• Home  
  • ಉಚ್ಚಿಲ ಬಡಾ ಗ್ರಾಪಂ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ (Beti Bachav, Beti Padav program at Uchila Bada Panchayath)
- ಕರಾವಳಿ

ಉಚ್ಚಿಲ ಬಡಾ ಗ್ರಾಪಂ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ (Beti Bachav, Beti Padav program at Uchila Bada Panchayath)

Share: ಉಚ್ಚಿಲ ಬಡಾ ಗ್ರಾಪಂ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಉಚ್ಚಿಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಡಾ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ  ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನೆರವೇರಿತು.  ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್‌ (Shivkumar Mendon) ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಮಹಿಳೆಯರ ಋತು ಸ್ರಾವದ ಬಗ್ಗೆ ಹಾಗೂ ಕಿಶೋರಿಯರ ಆರೋಗ್ಯದ ಬಗ್ಗೆ ಪಡುಬಿದ್ರಿ ಪ್ರಾಥಮಿಕ  ಆರೋಗ್ಯಾಧಿಕಾರಿ ಶ್ರೀಮತಿ […]

ಉಚ್ಚಿಲ ಬಡಾ ಗ್ರಾಪಂ ಸಭಾಭವನದಲ್ಲಿ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

ಉಚ್ಚಿಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಡಾ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ  ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನೆರವೇರಿತು.

 ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್‌ (Shivkumar Mendon) ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ಮಹಿಳೆಯರ ಋತು ಸ್ರಾವದ ಬಗ್ಗೆ ಹಾಗೂ ಕಿಶೋರಿಯರ ಆರೋಗ್ಯದ ಬಗ್ಗೆ ಪಡುಬಿದ್ರಿ ಪ್ರಾಥಮಿಕ  ಆರೋಗ್ಯಾಧಿಕಾರಿ ಶ್ರೀಮತಿ ಶಾಮಲಾ ಶೆಟ್ಟಿ ಮಾಹಿತಿ ನೀಡಿದರು.

 ಪೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳ ರಕ್ಷಣಾ ಘಟಕದ ಕಪಿಲಾರವರು ವಿವರಿಸಿದರು.

 ಸಿಎಚ್ಓ ಉಷಾರವರು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ನೀಡಿದರು.

  ಹೆಣ್ಣು ಮಗುವಿನ ಈ ಕಾರ್ಯಕ್ರಮದ ನೆನಪಿಗಾಗಿ ಗಿಡವೊಂದನ್ನು ನೀಡಲಾಯಿತು.

 ಕಾರ್ಯಕ್ರಮದಲ್ಲಿ ಪಿಡಿಒ ಸತೀಶ್, ಮಾಜಿ ಉಪಾಧ್ಯಕ್ಷೆ ಶಕುಂತಲಾ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಯುಸಿ ಶೇಖಬ್ಬ ರವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಶ್ರೀ ಶಕ್ತಿ ಸದಸ್ಯರು, ಮಕ್ಕಳ ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೈಲಾ ಸ್ವಾಗತಿಸಿ, ಪ್ರಸ್ತಾಪಿಸಿದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ನವೀನ್ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.