• Home  
  • ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ  (Destruction of drugs worth Lakhs seized in various Stations)
- ಅಪರಾಧ

ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ  (Destruction of drugs worth Lakhs seized in various Stations)

Share: ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ    (padubidri) ಪಡುಬಿದ್ರಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು 2,76,000 ರೂ. ಬೆಲೆಯ ಗಾಂಜಾವನ್ನು ನಂದಿಕೂರಿನ ಔದ್ಯೋಗಿಕ ನಗರದಲ್ಲಿ ನಾಶಪಡಿಸಲಾಯಿತು. ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 1 ಪ್ರಕರಣ ಸೇರಿ ಒಟ್ಟು 11 […]

ನಂದಿಕೂರು: ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ  

 (padubidri) ಪಡುಬಿದ್ರಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು 2,76,000 ರೂ. ಬೆಲೆಯ ಗಾಂಜಾವನ್ನು ನಂದಿಕೂರಿನ ಔದ್ಯೋಗಿಕ ನಗರದಲ್ಲಿ ನಾಶಪಡಿಸಲಾಯಿತು.

ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 1 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ.

ಇದರಲ್ಲಿ 2008ರ ಒಂದು ಪ್ರಕರಣ, 2011ರ ಒಂದು ಪ್ರಕರಣ, 2016ರ ಒಂದು ಪ್ರಕರಣ, 2020ರ ಎರಡು ಪ್ರಕರಣ, 2022ರ ಒಂದು ಪ್ರಕರಣ ಹಾಗೂ 2023ರ 5 ಪ್ರಕರಣ ಸೇರಿವೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್ ಕೆ. (Udupi SP DR Arun K)ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.