(Bantwala)ಬಂಟ್ವಾಳ: ಬಿಲ್ಡರ್ ಮನೆಯಲ್ಲಿ ಕಾರ್ಮಿಕನಿಂದ ಲಕ್ಷಾಂತರ ರೂ.ಮೌಲ್ಯದ ನಗ–ನಗದು ಕಳವು
ಬಂಟ್ವಾಳ: ಬಿಲ್ಡರೋರ್ವರ ಮನೆಯ ಕೆಲಸದ ಕಾರ್ಮಿಕನೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳವುಗೈದು ಉಂಡಮನೆಗೆ ಕನ್ನ ಎಸ್ಕೇಪ್ ಆಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಅವರ ಮನೆಯ ಕಪಾಟಿನಿಂದ 2.75ಲಕ್ಷ ರೂ. ನಗದು ಹಾಗೂ 4.96 ಲಕ್ಷ ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಎಗರಿಸಲಾಗಿದೆ ಎಂದು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ವಿವರ :
ಬಿಲ್ಡರ್ ಮೊಹಮ್ಮದ್ ಝಫರುಲ್ಲಾ ಅವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆಯ ಯುವತಿಯೋರ್ವಳ ಜೊತೆ ವಿವಾಹವಾಗಿದ್ದು, ಮಾಲಕರೊಂದಿಗೆ ಹೆಚ್ಚಿನ ವಿಶ್ವಾಸ ಹೊಂದಿದ್ದ. ಸಹಾಯಕನಾಗಿದ್ದ ಆಲಿಗೆ ಬೇಕಾದ ನೆರವನ್ನು ನೀಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸ ಇದೀಗ ಮಾಲಕನಿಗೆ ಮುಳುವಾಗಿ ಪರಿಣಮಿಸಿದೆ.
ಅ.18 ರಂದು ಮನೆ ಮಂದಿ ಎಲ್ಲರು ಮನೆಗೆ ಬೀಗ ಹಾಕಿ ಮಂಗಳೂರಿನಲ್ಲಿರುವ ತಮ್ಮನ ಮನೆಗೆ ಹೋಗಿದ್ದರು. ಈ ಸಂದರ್ಭ ಮನೆಯ ಬೀಗದ ಕೀ ಯನ್ನು ಆಲಿಯಲ್ಲಿ ನೀಡಿದ್ದರು.
ಅ . 19 ರಂದು ಕಾಮಗಾರಿಯ ವಿಚಾರಕ್ಕೆಂದು ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು. ಮರುದಿನ ಮತ್ತೆ ಅವರು ಪೋನ್ ಮಾಡಿದಾಗಲೂ ಈತನ ಮೊಬೈಲ್ ಆಫ್ ಆಗಿತ್ತು.
ಹಾಗೆಯೇ ಅ. 23 ರಂದು ರಾತ್ರಿ 8 ಗಂಟೆಯ ಹೊತ್ರಿಗೆ ಮನೆಗೆ ಬಂದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಪಡೆಯಲೆಂದು ಆತನಿಗೆ ಪೋನ್ ಮಾಡಿದಾಗ ಆಗಲೂ ಸ್ವಿಚ್ ಆಫ್ ಆಗಿತ್ತು.
ಅನುಮಾನದಿಂದ ಮನೆಯ ಹಿಂಬದಿಯ ಕಿಟಕಿಯಲ್ಲಿ ಇಣುಕಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.
ಕೂಡಲೇ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿದ ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಮೊಹಮ್ಮದ್ ಹಾಗೂ ಕಪಾಟಿನಲ್ಲಿರಿಸಲಾಗಿದ್ದ ನಗದು, ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಮತ್ತವರ ಸಿಬ್ಬಂದಿಗಳು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳದವನ್ನು ಸ್ಥಳಕ್ಕೆ ಕರೆಸಲಾಗಿದೆ.

