(belthangadi) ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್ ಪೂಂಜಾ (mla hareesh poonja)ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ (forest officers) ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿದೆ.
ಅರಣ್ಯ ಇಲಾಖೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ (dharmastala) ಪೊಲೀಸರು ಶಾಸಕರು ಹಾಗೂ ಅವರ ಬೆಂಬಲಿಗರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ಟೋಬರ್ 9 ರಂದು ಬಿಜೆಪಿ ಶಾಸಕರು ಹಾಗೂ ಮುಖಂಡರು ಸ್ಥಳೀಯರೊಂದಿಗೆ ಸೇರಿ ಮನೆ ತೆರವು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಶಾಸಕ ಹರೀಶ್ ಪೂಂಜಾ ಅವರು ಅರಣ್ಯಾಧಿಕಾರಿಯನ್ನು ನಿಂದಿಸಿದ್ದರು. ಇಲ್ಲಿಯವರೆಗೂ ನೀವು ಎಲ್ಲಿ ಹೋಗಿದ್ದಿರಿ ಎನ್ನುವ ಜತೆಗೆ ಅವಾಚ್ಯ ಶಬ್ದಗಳನ್ನು ನಿಂದಿಸಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಲಯ ಅರಣ್ಯಾಧಿಕಾರಿ ಕೆ.ಕೆ. ಜಯಪ್ರಕಾಶ್ (forest officer k.k Jayaprakash) ದೂರು ದಾಖಲಿಸಿದ್ದಾರೆ.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈಗಾಗಲೇ ನೊಟೀಸ್ ನೀಡಲಾಗಿದ್ದ ಮನೆಗಳ ತೆರವಿಗೆ ಹೋಗಿದ್ದಾಗ ಶಾಸಕರು ಹಾಗೂ ಅವರ ಬೆಂಬಲಿಗರು ಬೆದರಿಕೆ ಹಾಕಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯಾಧಿಕಾರಿ ಜಯಪ್ರಕಾಶ್ ದೂರಿನಲ್ಲಿ ತಿಳಿಸಿದ್ದಾರೆ
ಸಾರ್ವಜನಿಕ ಕೆಲಸಕ್ಕೆ ಅಡ್ಡಿಪಡಿಸಿದ ಜತೆಗೆ ಬೆದರಿಕೆ ಹಾಕಿದ ಕುರಿತು ಐಪಿಸಿ 1860(U/S-143, 353, 504, 149) ಅಡಿ ಪ್ರಕರಣ ದಾಖಲಿಸಿಕೊಂಡು ಧರ್ಮಸ್ಥಳ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.