# Tags

ಗ್ಯಾರಂಟಿಗೆ ಟೀಕೆ, ಜನರಿಂದ ಉತ್ತರ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Criticism of guarantee scheme, response from people : Udupi Dist Minister Laxmi Hebbalkar)

   ಗ್ಯಾರಂಟಿಗೆ ಟೀಕೆ, ಜನರಿಂದ ಉತ್ತರ ಸಿಕ್ಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್   ಉಪ‌ ಚುನಾವಣಾ ಫಲಿತಾಂಶ ವಿಪಕ್ಷಗಳ ಆರೋಪಕ್ಕೆ ಜನರಿಂದಲೇ ಚಾಟಿ ಏಟು (Kanakapura) ಕನಕಪುರ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರು […]

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ (Develop discipline in life, desire to achieve, self confidence : Udupi DC Dr. K Vidyakumari)

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ   ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟನೆ  (Udupi) ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.  ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ […]

  ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ  (Congress win in by election : victory by Haleyangadi Congress workers)  

  ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಹಳೆಯಂಗಡಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ   (Haleyangadi) ಹಳೆಯಂಗಡಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು. ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ […]

ಔಷಧೀಯ ಗುಣವುಳ್ಳ ಕಾಡುಪೀರೆ ನಮ್ಮ ಆರೋಗ್ಯ ರಕ್ಷಕ (spiny gourd is our health guard with medicinal)   

ಔಷಧೀಯ ಗುಣವುಳ್ಳ ಕಾಡುಪೀರೆ ನಮ್ಮ ಆರೋಗ್ಯ ರಕ್ಷಕ     ಚಿತ್ರ, ಬರಹ: ಕುಮಾರ್ ಪೆರ್ನಾಜೆ, ಪುತ್ತೂರು (Putturu) ಪುತ್ತೂರು: ಕಾಡು ಪೀರೆ, ಕಾಟು ಪೀರೆ ಎಂದೆಲ್ಲಾ ಹೆಸರಿನಿಂದ ಕರೆಯುವ ಈ ತರಕಾರಿ ಔಷಧೀಯ ಗುಣವುಳ್ಳದ್ದಾಗಿದ್ದು, ಜನರು ಇದನ್ನು ಬೆಳೆಯಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ.  ಕಾಡಿನಲ್ಲಿ ಬೆಳೆಯುತ್ತಿದ್ದ ಈ ತರಕಾರಿ, ಮಡಾ ಹಾಗಲಕಾಯಿ ಹೈಬ್ರಿಡ್ ತರಕಾರಿ ಇದೀಗ ಮಾರುಕಟ್ಟೆಗೆ ಬಂದಿದೆ. ಈ ಬಳ್ಳಿ ತರಕಾರಿಯನ್ನು ಇಂಗ್ಲೀಷ್ ನಲ್ಲಿ spiny gourd ಎಂದು ಕರೆಯುತ್ತಾರೆ.  ಇದರ ಇನ್ನೊಂದು ಹೆಸರು  […]

ಬಂಟಕಲ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕರ ಸಭೆ (PARENT- TEACHER MEET AT SMVITM, BANTAKAL)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕ– ರಕ್ಷಕರ ಸಭೆ (Bantakal) ಬಂಟಕಲ್:‌ ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ 2024-25ನೇ ಸಾಲಿನ ಶಿಕ್ಷಕ-ರಕ್ಷಕರ ಮೊದಲನೆಯ ಸಭೆ ಸಂಸ್ಥೆಯ ಆವರಣದಲ್ಲಿ ನೆರವೇರಿತು.  ಇಂಜಿನಿಯರಿಂಗ್ ಕೋರ್ಸಿನ ಬಗ್ಗೆ ಅರಿವು ಮೂಡಿಸುವುದು, ಸಂಸ್ಥೆಯ ನಿಯಮಗಳು ಮತ್ತು ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. […]

ಪರಿಸರ ಉಳಿಸಲು ಶಿಕ್ಷಣ ಪ್ರೇರಣೆ ನೀಡಲಿ – ಕೇಮಾರು ಸ್ವಾಮೀಜಿ (Let education inspire to savethe environment : Kemaru Swamiji)

ಪರಿಸರ ಉಳಿಸಲು ಶಿಕ್ಷಣ ಪ್ರೇರಣೆ ನೀಡಲಿ – ಕೇಮಾರು ಸ್ವಾಮೀಜಿಕಟೀಲಿನಲ್ಲಿ ವಿಜ್ಞಾನವನ ಶಕ್ತಿ 2.೦ ಉದ್ಘಾಟನೆ (Kateelu) ಕಟೀಲು : ದೇವರು ಕ್ಷಮಿಸಿಯಾರು. ಆದರೆ ಪ್ರಕೃತಿ ಕ್ಷಮಿಸುವುದಿಲ್ಲ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡೋಣ. ಪರಿಸರ ಉಳಿಸಲು ಇವತ್ತಿನ ಶಿಕ್ಷಣ ಪ್ರೇರಣೆ ನೀಡಬೇಕು ಎಂದು ಕೇಮಾರು ಸಾದೀಪನಿ ಮಠದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ದುರ್ಗಾ ಕ್ಯಾಪ್ಸ್ ಫೌಂಡೇಶನ್ ಸೈನ್ಸ್ ಪಾರ್ಕ್ ವತಿಯಿಂದ ನಿರ್ಮಿತ 51 ಬಗೆಯ […]

ಮುಲ್ಕಿ: ವಿಧಾನಸಭಾ ಉಪಚುನಾವಣೆಯಲ್ಲಿ ಜಯಭೇರಿ; ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

(Mulki) ಮುಲ್ಕಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು,  ಶನಿವಾರ ಸಂಜೆ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಮುಲ್ಕಿ ಬಸ್ ನಿಲ್ದಾಣದ ಬಳಿ ನಡೆಯಿತು.ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮಾತನಾಡಿ, ಬಿಜೆಪಿ ಪಕ್ಷದ ಅಪಪ್ರಚಾರಗಳಿಗೆ ಕಿವಿಗೊಡದೆ ಮತದಾರರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವರ ಗ್ಯಾರಂಟಿ ಯೋಜನೆಗಳನ್ನು ಕೈ ಹಿಡಿದಿದ್ದು ಚುನಾವಣೆಯಲ್ಲಿ ಭರ್ಜರಿ […]

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ (Kaup : On 26TH Nov, save the Constitution day at Kaup)

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ   (Kaup) ಕಾಪು : ರಕ್ಷಣಾಪುರ ಜವನೆರ್  ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂಜೆ 3 ಗಂಟೆಗೆ  ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಸಂಜೆ ಕಾಪು ಪತ್ರಿಕಾಭವನದಲ್ಲಿ  ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನ. 26 ಡಾ.ಬಿ. ಆರ್. […]

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ ( Congress Victory led by ex Minister Vinaykumar Sorake in Kaup)

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ (Kaup) ಕಾಪು: ಹೈವೋಲ್ವೇಜ್ ಕ್ಷೇತ್ರವಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವಿನ ಪ್ರಯುಕ್ತ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಕಾಂಗ್ರೆಸ್‌ ನೇತಾರರಾದ ಮಲ್ಲಿಕಾರ್ಜುನ ಖರ್ಗೆ […]

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​(Love of Kannda language should be everyone : Janardhan Kodavuru)

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​ ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ತಿಳಿಸಿದರು.  ಅವರು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ  ಸಂಭ್ರಮಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ […]