ಮಣಿಪಾಲ ಹಕುನ ಮಟಾಟ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: 40ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ
ಮಣಿಪಾಲ ಈಶ್ವರನಗರ ಸಮೀಪದ ಹಕುನ ಮಟಾಟ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.