# Tags

 ಕಾಪು  ಮಲ್ಲಾರ್  ರಾಣ್ಯಕೇರಿ ಯಲ್ಲಿ   ಶ್ರೀ ದೇವಿ ಫ್ರೆಂಡ್ಸ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ  

  ಶ್ರೀ ದೇವಿ ಫ್ರೆಂಡ್ಸ್ ಕಾಪು ಮಲ್ಲಾರ್ – ರಾಣ್ಯಕೇರಿ ಇದರ ವತಿಯಿಂದ ರಾಣೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ  ಸಮಾರಂಭವು ಕೋಟೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ಬೆಳಿಗ್ಗೆ ಜರಗಿತು.  ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್  ಉದ್ಘಾಟಿಸಿದರು.  ಈ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಈ ಸಂದರ್ಭ ರಾಣೆ ಸಮಾಜದ ಪ್ರಮುಖರಾದ ಜಯ ರಾಣ್ಯ, ಬಿ  ಕೆ ಶ್ರೀನಿವಾಸ್, ರವೀಂದ್ರ ಮಲ್ಲಾರು, ಕೋಟೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಮಾಜಿ […]

ತರೀಕೆರೆ: ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಜಗಳ: ಚಾಕು ಇರಿತದಿಂದ ಯುವಕ ಸಾವು

ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ಯುವಕ ವರುಣ್ ಎಂದು ಗುರುತಿಸಲಾಗಿದೆ. ತರೀಕೆರೆ ಶಾಸಕ ಶ್ರೀನಿವಾಸ್‌ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ, ವರುಣ್‌ಗೆ ಡ್ರ್ಯಾಗರ್ ಹಾಕಿದ್ದಾನೆ. ವರುಣ್‌ […]

ಎಮ್ಮೆ, ಕೋಣಗಳನ್ನುಕಡಿಯಬಹುದಾದರೆ, ಹಸುಗಳನ್ನೂಏಕೆಕಡಿಯಬಾರದು: ಮೈಸೂರಿನಲ್ಲಿ ಕರ್ನಾಟಕ ಸಚಿವರ ಹೇಳಿಕೆ

ಎಮ್ಮೆ, ಕೋಣಗಳನ್ನು ಕಡಿಯಬಹುದಾದರೆ, ಹಸುಗಳನ್ನೂ ಏಕೆ ಕಡಿಯಬಾರದು: ಮೈಸೂರಿನಲ್ಲಿ ಕರ್ನಾಟಕ ಸಚಿವರ ಹೇಳಿಕೆ ಮೈಸೂರು: “ಎಮ್ಮೆ, ಕೋಣಗಳನ್ನು ಕಡಿಯಬಹುದು ಅಂತಾದರೆ ಹಸುಗಳನ್ನೂ ಏಕೆ ಕಡಿಯಬಾರದು?” ಎಂದು ಪಶುಸಂಗೋಪನ ಸಚಿವ ಕೆ. ವೆಂಕಟೇಶ್ ಹೊಸದೊಂದು ಹೇಳಿಕೆ ನೀಡಿದ್ದಾರೆ.  ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಹಿಂದಿನ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದ  ಕೆಲ ಯೋಜನೆಗಳಿಗೆ ಕೊಕ್ ಕೊಡಲಾಗಿತ್ತು. ಇದೀಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ಸರ್ಕಾರದ ಕೆಲವು ಯೋಜನೆಗಳಿಗೆ ತಿಲಾಂಜಲಿ ಇಡುತ್ತಿದೆ.  ಕರ್ನಾಟಕದಲ್ಲಿ  ಈಗಾಗಲೇ […]

ನಾಗಮಂಡಲದಲ್ಲಿ ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು

ನಾಗಮಂಡಲ:  ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿ ಧಾರುಣವಾಗಿ ಮೃತ ಪಟ್ಟ ಘಟನೆ ನಾಗಮಂಡಲ ತಾಲೂಕಿನ ತಿರುಮಲಪುರ ಬಳಿ ಇಂದು ಬೆಳಿಗ್ಗೆ ಘಟಿಸಿದೆ.  ಘಟನೆಯಲ್ಲಿ ನವೀನ, ಹೇಮತ್‌ ಶರತ್‌ ಹಾಗೂ ಮತ್ತೋರ್ವ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಕಡೆಯಿಂದ ಚನ್ನರಾಯನ ಪಟ್ಟಣ ಕಡೆ ಸರಕು  ಹೇರಿಕೊಂಡು ಸಾಗುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ. ನಾಗಮಂಡಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

ಗ್ಯಾರಂಟಿ ಯೋಜನೆ ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಟೀಕಿಸುವ ಭರದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ನ ಗೃಹ ಲಕ್ಷ್ಮಿ ಯೋಜನೆಯಂತೆ 2000 ರೂ.ನೀಡಬೇಂದರೆ ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲಾದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಮುಸ್ಲಿಂರ […]

ಒಡಿಶಾದ ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ

ಒಡಿಶಾದ ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ ಬೆಂಗಳೂರು: ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತ ಹಿನ್ನೆಲೆಯಲ್ಲಿ ಇಂದು ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಿದ್ದು, ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ […]

ಭಾರತೀಯ-ಅಮೆರಿಕನ್ ಅಜಯ್ ಬಂಗಾ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಭಾರತೀಯ-ಅಮೆರಿಕನ್ ವ್ಯಕ್ತಿ ಅಜಯ್ ಬಂಗಾ ಅವರು ಶುಕ್ರವಾರ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ 63 ವರ್ಷದ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ವಿಶ್ವ ಬ್ಯಾಂಕ್‌ನ 14 ನೇ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಬಂಗಾ ಅವರು ವಿಶ್ವ ಬ್ಯಾಂಕ್‌ನ ಮುಖ್ಯಸ್ಥರಾಗಿರುವ ಮೊದಲ ಭಾರತೀಯ-ಅಮೆರಿಕನ್ ಆಗಿದ್ದಾರೆ.   ಫೆಬ್ರವರಿಯಲ್ಲಿ ಕೆಳಗಿಳಿಯುವ ನಿರ್ಧಾರವನ್ನು ಘೋಷಿಸಿದ್ದ ಡೇವಿಡ್ ಮಾಲ್ಪಾಸ್ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.  ಬಂಗಾ ಇತ್ತೀಚೆಗೆ ಜನರಲ್ ಅಟ್ಲಾಂಟಿಕ್‌ನಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ, ಅವರು […]

ರೈಲು ಅಪಘಾತಕ್ಕೆ ಕಾರಣರಾದ ದೋಷಿಗಳನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

 ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್‌ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್‌ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಮುಂದುವರಿದು, ‘ಇದೊಂದು ಅತ್ಯಂತ ನೋವು ಕೊಡುವ ಸಂಗತಿಯಾಗಿದೆ. ಗಾಯಾಳುಗಳ ಚಿಕಿತ್ಸೆಗೆ […]

ಸಿದ್ದರಾಮಯ್ಯ ಸರಕಾರದಲ್ಲಿ ಸಂಭಾವ್ಯ ಉಸ್ತುವಾರಿ ಸಚಿವರು

ಸಿದ್ದರಾಮಯ್ಯ ಸರಕಾರದಲ್ಲಿ ಸಂಭಾವ್ಯ ಉಸ್ತುವಾರಿ ಸಚಿವರು ಬೆಂಗಳೂರು; ನೂತನ ಸರಕಾರ ಬಂದ ಬಳಿಕ ಆಡಳಿತ ಯಂತ್ರ ಚುರುಕುಗೊಳಿಸಿದ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಸಚಿವರ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಉಸ್ತುವಾರಿ ಸಚಿವರಾಗಿ ಸಚಿವ ಕೆ.ಜೆ.ಜಾರ್ಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ನೇಮಕ ಮಾಡಲಾಗಿದೆ‌ ಎನ್ನುವುದು ಪ್ರಾಥಮಿಕ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ‌. ಯಾವ ಜಿಲ್ಲೆಗೆ ಯಾರು ಉಸ್ತುವಾರಿ ಸಚಿವರು? ಬೆಂಗಳೂರು ನಗರ ಕೆ ಜೆ ಜಾರ್ಜ್ ಬೆಂಗಳೂರು […]

ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ – ರಮೀಜ್ ಹುಸೇನ್

ಕಾಪು: ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯ ಮಾತನ್ನು ಈಡೇರಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಅಭಿನಂದನೆಗಳು ಎಂದು ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ತಿಳಿಸಿದ್ದಾರೆ. ಗ್ಯಾರಂಟಿ ಜಾರಿಗಳನ್ನು ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಲ್ಲದೇ ಸಾಮಾನ್ಯ ಜನರಿಗೆ ಆಸರೆಯನ್ನು ನೀಡಿದೆ.  ಜನ ಸಾಮಾನ್ಯರು ಬೆಲೆ ಏರಿಕೆ ಹಾಗು ಯುವ ಜನತೆ ನಿರುದ್ಯೋಗದ ಸಮಸ್ಯೆಯಿಂದ ತತ್ತರಿಸಿರುವ‌ ಈ ಸಂದರ್ಭದಲ್ಲಿ ಜನರ ಬದುಕಿಗೆ […]