# Tags

ಕೊಲ್ಲೂರಿನಲ್ಲಿ ಕಲುಷಿತಗೊಂಡ ನೀರು – ಪರಿಹಾರಕ್ಕಾಗಿ ಆಗ್ರಹ

ಕೊಲ್ಲೂರಿನಲ್ಲಿ ಕಲುಷಿತಗೊಂಡ ನೀರು – ಪರಿಹಾರಕ್ಕಾಗಿ ಆಗ್ರಹ ಕೊಲ್ಲೂರು: ಕೋಟ್ಯಾಂತರ ರೂಪಾಯಿ ವ್ಯಯಿಸಿದ ಕೊಲ್ಲೂರು ಒಳಚರಂಡಿ ಹಾಗೂ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಳಪೆ ಕಾಮಗಾರಿಯ ಪರಿಣಾಮ ಸುತ್ತಮುತ್ತಲಿನ ಗ್ರಾಮಸ್ಥರು ಕುಡಿಯಲು ಬಳಸುವ ನೀರು ಕಲುಷಿತಗೊಂಡು ಕುಡಿಯುವ ನೀರಿಗೆ ಹಾಹಾಕಾರವೆದ್ದಿದೆ. ಯು. ಜಿ. ಡಿ ಕಳಪೆ ಕಾಮಗಾರಿಯಿಂದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮೀಪದ ಅಗ್ನಿ ತೀರ್ಥವೂ ಕಲುಷಿತಗೊಂಡಿದೆ. ಪರಿಣಾಮವಾಗಿ ಸ್ಥಳೀಯ ವಾಸಿಗಳ ಕುಡಿಯುವ ನೀರಿನ ಬಾವಿಗಳಿಗೂ ಕಲುಷಿತ ನೀರು ನುಗ್ಗಿದ್ದು, ಬಾವಿಗಳ ನೀರು ನಿಷ್ಪ್ರಯೋಜಕವಾಗಿದೆ. ಈ […]

ಮಣಿಪಾಲ: ಗಾಂಜಾ ಸೇವನೆ- ನಾಲ್ವರು ವಶಕ್ಕೆ

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರನ್ನು ಮಣಿಪಾಲ ಪೊಲೀಸರು ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ ಬಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓಡಿಸ್ಸಾದ ಸಾತ್ವಿಕ್ ಸಾಹೂ(21), ಅಸ್ಸಾಮಿನ ರಿಷಿರಾಜ್ ಮೊಮಿನ್(21),   ಅಮನ್ ಗೊಗೈ(21), ಬಿಹಾರದ ಅಮನ್ ಕುಮಾರ್(21) ಎಂಬುವವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವರದಿಯಲ್ಲಿ ಇವರೆಲ್ಲರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ: ಗಾಂಜಾ […]

ಗ್ಯಾರಂಟಿ ಅನುಷ್ಠಾನಕ್ಕೆ ಕುಂದಾಪುರ ಕಾಂಗ್ರೆಸ್ ಹರ್ಷ

ಕುಂದಾಪುರ: ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಘೋಷಣೆ ಮಾಡಿರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರು, ಬಿಜೆಪಿ ಮುಖಂಡರು ಗ್ಯಾರಂಟಿ ಬಗ್ಗೆ ಟೀಕೆ ಮತ್ತು ಲೇವಡಿ ಮಾಡಿ ಗ್ಯಾರಂಟಿಗೆ ವಾರಂಟಿ ಇಲ್ಲ ಮತ್ತು ಗ್ಯಾರಂಟಿ ಪುಸ್ತಕದೊಳಗಿನ ನವಿಲಗರಿ ಎಂದಿದ್ದರು. ಆದರೆ ಕಾಂಗ್ರೆಸ್ ನಡೆದಂತೆ ನುಡಿಯುವ ಪಕ್ಷ ಎಂದಿದ್ದಾರೆ. ಪ್ರಥಮ ಸಂಪುಟ ಸಭೆಯಲ್ಲಿ […]

ಉಡುಪಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023 ರ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಈ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.  ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ […]

ಗ್ಯಾರಂಟಿ ಯೋಜನೆಯಲ್ಲಿ ಬಿಜೆಪಿ ರಾಜಕೀಯ – ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜಕೀಯ ಮಾಡುತ್ತಿರುವ ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಅವರು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ಕುಯಿಲಾಡಿ ಸುರೇಶ್ ನಾಯಕ್ ಅವರು ಬಸ್ ಮಾಲಕರ ಸಂಘದ ಜಿಲ್ಲಾಧ್ಯಕ್ಷ, ಅದೇ ರೀತಿ ಉಡುಪಿಯ ಬಿಜೆಪಿ ಜಿಲ್ಲಾಧ್ಯಕ್ಷರೂ ಕೂಡ ಆಗಿರುತ್ತಾರೆ. ಆದರೂ ಕೊರೋನಾ ಸಮಯದಲ್ಲಿ ಬಸ್‌ನ ಟಿಕೆಟ್ ದರ ಏರಿಕೆಯನ್ನು ಮಾಡಿದ್ದರು. ಅವರದ್ದೇ ಸರಕಾರ ಇದ್ದರೂ ಬೆಲೆ ಏರಿಕೆ ಕಡಿಮೆ ಮಾಡಿಲ್ಲ. ಟೋಲ್ […]

ಜೂನ್ 7 ರಂದು ಅಂಚೆ ಅದಾಲತ್

ಉಡುಪಿ: ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜೂನ್ 7 ರಂದು ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಜೂನ್ 5 ರೊಳಗೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದು ಅಥವಾ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ಚರ್ಚಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಉಡುಪಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಸದರು ಸಂಬಳದ ಭಾಗವನ್ನು ಒಡಿಶಾ ಸಂತ್ರಸ್ತರಿಗೆ ನೀಡಬೇಕು: ವರುಣ್ ಗಾಂಧಿ

ತಮ್ಮ ಸಂಬಳದ ಒಂದು ಭಾಗವನ್ನು ಒಡಿಶಾ ರೈಲು ಅಪಘಾತದಲ್ಲಿ ಬಲಿಯಾದವರ ಕುಟುಂಬಗಳಿಗೆ ಸಹಾಯ ಮಾಡಲು ನೀಡುವಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಶನಿವಾರ ತಮ್ಮ ಸಹ ಸಂಸದರಿಗೆ ಮನವಿ ಮಾಡಿಕೊಂಡಿದ್ದಾರೆ. “ಒಡಿಶಾ ರೈಲು ಅಪಘಾತ ಹೃದಯವಿದ್ರಾವಕವಾಗಿದೆ,ಈ ಅಪಘಾತದಿಂದ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು ನಿಲ್ಲಬೇಕಾಗಿದೆ. ಅವರಿಗೆ ಮೊದಲು ಬೆಂಬಲ ಸಿಗಬೇಕು ಮತ್ತು ನಂತರ ನ್ಯಾಯ ಸಿಗಬೇಕು” ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಸಂಸದರು ಸಂಬಳದ ಭಾಗವನ್ನು ಒಡಿಶಾ ಸಂತ್ರಸ್ತರಿಗೆ ನೀಡಬೇಕು: ವರುಣ್ […]

ಖಾಲಿ ಹುದ್ದೆಗೆ ಶೀಘ್ರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾಗುವುದು ಖಚಿತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.  ಮುಂದಿನ ವರ್ಷ ಈ ರೀತಿ ಸಮಸ್ಯೆ ಆಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳುತ್ತೇವೆ. ಪಠ್ಯ ಪರಿಷ್ಕರಣೆ ಸಂಬಂಧ ಸೋಮವಾರ ಸಂಜೆ ಬಂದು ಕಾಣುವಂತೆ ಸಿಎಂ ಹೇಳಿದ್ದಾರೆ. ಈ ಬಗ್ಗೆ ಸಾಹಿತಿಗಳು-ತಜ್ಞರ ಜೊತೆಯೂ ಚರ್ಚೆಯಾಗಿದೆ. ಸಿಎಂ ನೇತೃತ್ವದಲ್ಲಿಯೇ ಪರಿಷ್ಕರಣೆಗೆ ಮುಂದಾಗಲಾಗುವುದು ಎಂದಿದ್ದಾರೆ. ನನ್ನ ಇಲಾಖೆಯಲ್ಲಿ ಶಿಕ್ಷಕರ ಕೊರತೆಯಿದೆ. ಶಿಕ್ಷಕರ ಕೌನ್ಸಲಿಂಗ್ ಆರಂಭವಾಗಿದೆ, ಅಲ್ಲದೆ ಖಾಲಿ ಇರುವ ಹುದ್ದೆಗೆ ಶೀಘ್ರ ನೇಮಕಾತಿ ನಡೆಯಲಿದೆ ಎಂದು […]

ಕಾಂಗ್ರೆಸ್​​​ ಅವರು ಗೋಹತ್ಯೆ ನಿಷೇಧ ರದ್ದು ಮಾಡಲಿ ನೋಡೋಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕಾಂಗ್ರೆಸ್ಸಿಗರು ಹಿಂದೂಗಳ ಭಾವನೆ ವಿರೋಧಿಸುತ್ತಲೇ ಬಂದಿದ್ದಾರೆ. ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುಡುಗಿದ್ದಾರೆ. ರಾಜ್ಯದ ಜನರು ಕಾಂಗ್ರೆಸ್​ನವರಿಗೆ ಉತ್ತರ ಕೊಡುತ್ತಾರೆ. ಹಸು ಯಾಕೆ ಕಡಿಯಬಾರದು ಎಂದು ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಮ್ಮ ಪಕ್ಷದಿಂದ ಏನು ಹೋರಾಟ ಮಾಡಬೇಕೋ ಮಾಡ್ತೀವಿ.  ಇದು ಭಾವನಾತ್ಮಕ ಪ್ರಶ್ನೆ ಆಗುತ್ತೆ. ಗೋವಿನ ಬಗ್ಗೆ ಕೋಟ್ಯಂತರ ಜನರಿಗೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಕಡಿತೀರಿ ಇದನ್ಯಾಕೆ ಕಡಿಯಲ್ಲ ಎನ್ನುವುದರಲ್ಲಿ […]

ಕೋಲಾರದಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

6,000 ರೂ. ಲಂಚ ಪಡೆಯುತ್ತಿದ್ದಾಗಲೇ ಕೋಲಾರ ಜಿಲ್ಲೆಯ ಗೃಹ ರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರದ ಗೃಹ ರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದ ರಾಜೇಂದ್ರನ್ ಅವರು ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಲು ಸುಬಾನಾಯಕ್ ಎಂಬುವವರಿಂದ 6,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸುಬಾನಾಯಕ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಲಂಚ ಪಡೆಯುತ್ತಿದ್ದಾಗಲೇ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.