# Tags

ಕೇಂದ್ರ ರೈಲ್ವೆ ಸಚಿವರು ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕ

ಕೇಂದ್ರ ರೈಲ್ವೆ ಸಚಿವರು ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕ ಒಡಿಶಾ ರೈಲು ದುರಂತದ ನೈತಿಕ ಹೊಣೆಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಒತ್ತಾಯಿಸಿದ್ದಾರೆ.ಕೇಂದ್ರ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲ. ರೈಲುಗಳ ಮುಖಾಮುಖಿ ಡಿಕ್ಕಿ ನಡೆಯುವಂತಹ ‘ಕವಚ’ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದಿದ್ದಾರೆ. ಪ್ರಧಾನಿ ಮೋದಿ ಹೊಸ ರೈಲುಗಳ ಉದ್ಘಾಟನೆ ವೇಳೆಯೂ ರೈಲ್ವೆ ಸಚಿವರು ಕಾಣಲೇ ಇಲ್ಲ. ಈ ಭೀಕರ ಅಪಘಾತದ ನಂತರ ಅವರು […]

ಟೆಸ್ಟ್ ಕ್ರಿಕೆಟ್’ಗೆ  ಡೇವಿಡ್ ವಾರ್ನರ್ ವಿದಾಯ

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇಂದು (ಜೂನ್ 3, ಶನಿವಾರ) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಟೆಸ್ಟ್ ಚಾಂಪಿಯನ್ಶಿಪ್ 2023ಕ್ಕೂ 4 ದಿನ ಮೊದಲು ವಾರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಸದ್ಯಕ್ಕೆ ಅವರು ನಿವೃತ್ತಿ ಪಡೆಯುತ್ತಿಲ್ಲ. ಆಸ್ಟ್ರೇಲಿಯಾದ ಬೇಸಿಗೆ ಕೊನೆಯಲ್ಲಿ ಅಂದರೆ ಮುಂಬರುವ ಜನವರಿಯಲ್ಲಿ ಪಾಕಿಸ್ತಾನ ಎದುರಿನ ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ

ಕುಮಟಾದಲ್ಲಿ ಈಡಿಗ ಬಿಲ್ಲವ ನಾಮಧಾರಿ ಚಿಂತನ ಸಭೆ

ಕುಮಟಾ: ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಮತ್ತು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ನಾಮಧಾರಿ ಸಭಾಭವನದಲ್ಲಿ ನಡೆಯಿತು. ಈಡಿಗ ಬಿಲ್ಲವ ನಾಮಧಾರಿ ಚಿಂತನ ಸಭೆ ಶನಿವಾರ ಸಂಜೆ ಪ್ರಾರಂಭ ಗೊಂಡಿತು. ಪರಮಪೂಜ್ಯ ಡಾಕ್ಟರ್ ಶ್ರೀ ಪ್ರಣವಾನಂದ ಸ್ವಾಮೀಜಿ ರವರು  ಹಳದಿ ಬಾವುಟವನ್ನು ಧ್ವಜಾರೋಹಣ ಮಾಡಿದರು.  ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪೂಜಾರಿ ಉದ್ಘಾಟನೆ ನೆರವೇರಿಸಿದರು.  ಸಭೆಯಲ್ಲಿ ನಾಮಧಾರಿ ಸಮಾಜದ ನಾಯಕರುಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಎರಡು ದಿನಗಳ ಕಾಲದ ಈಡಿಗ […]

ಕಾರ್ಕಳ: ನಲ್ಲೂರಿನಲ್ಲಿ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಮರಕ್ಕೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ.

ಕಾರ್ಕಳ ತಾಲೂಕಿನ ನಲ್ಲೂರು ಪರಪ್ಪಾಡಿ ಎಂಬಲ್ಲಿ ಇಂದ ಬೆಳಿಗ್ಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ  ಟೆಂಪೋ ಮುಗುಚಿ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಲ್ಪೆಯಿಂದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆಯ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಟೆಂಪೋದಲ್ಲಿದ್ದ ಗೊಬ್ಬರ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.  ಟೆಂಪೋದಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದು ಆ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ […]

ಉಡುಪಿಯಲ್ಲಿ ಬಿಜೆಪಿ ಕ್ಷೇತ್ರದ ಅವಲೋಕನ ಸಭೆ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು. ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ   ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ  ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್,  ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ […]

ಈಶ್ವರ್ ಎಂ.ಜಿ. ಅವರಿಗೆ ಡಾಕ್ಟರೇಟ್ ಪದವಿ

ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಈಶ್ವರ್  ಎಂ. ಜಿ. ಅವರು ಸಲ್ಲಿಸಿದ ‘ಕರ್ನಾಟಕ ನಗರ ಮತ್ತು ಗ್ರಾಮೀಣದಲ್ಲಿ ಆರೋಗ್ಯ ಸೇವೆಗಳು- ಶಿವಮೊಗ್ಗ ಜಿಲ್ಲೆಯಲ್ಲಿ ಒಂದು  ಅಧ್ಯಯನ’ (ಹೆಲ್ತ್ ಕೇರ್ ಸರ್ವಿಸ್ ಇನ್ ಅರ್ಬನ್ – ರೂರಲ್ ಕರ್ನಾಟಕ: ಎ ಸ್ಟಡಿ ಇನ್ ಶಿವಮೊಗ್ಗ ಡಿಸ್ಟ್ರಿಕ್ಟ್) ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಕುವೆಂಪು ವಿಶ್ವವಿದ್ಯಾಲಯ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ಜಯರಾಮ್ ಭಟ್ […]

ಎಐಇಟಿ ‘ಚಿಂತನ- ಮಂಥನ’- ರೀಡರ್ಸ್ ಕ್ಲಬ್ ‘ಕುತೂಹಲದಿಂದ ಆವಿಷ್ಕಾರ ಸಾಧ್ಯ’

ಮಿಜಾರು (ಮೂಡುಬಿದಿರೆ): ‘ಕುತೂಹಲದಿಂದ ಆವಿಷ್ಕಾರ ಸಾಧ್ಯ’ ಎಂದು ಸಾಹಿತಿ ಸುರೇಶ್ ಕುಲಕರ್ಣಿ ಹೇಳಿದರು.ಆಳ್ವಾಸ್ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕಾಲೇಜಿ (ಎಐಇಟಿ)ನಲ್ಲಿ ‘ಚಿಂತನ- ಮಂಥನ’ ರೀಡರ್ಸ್ ಕ್ಲಬ್ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಬೇಂದ್ರೆ ಅವರ ಒಡನಾಟ’ ಕುರಿತು ಅವರು ಉಪನ್ಯಾಸ ನೀಡಿದರು.‘ನಾದ’ ಸ್ವರದಿಂದ ಮಾತ್ರ ಸಮೂಹ ಸಂವಹನ ಯಶಸ್ವಿಯಾಗುತ್ತದೆ. ‘ನಾ’ ಎಂಬುದೇ ಅಹಂಕಾರ. ‘ದ’ ಎಂದರೆ ಧ್ವನಿ. ಅಹಂಕಾರವನ್ನು ಬಿಟ್ಟ ಧ್ವನಿ ಮಾತ್ರ ಜನರಿಗೆ ತಲುಪಲು ಸಾಧ್ಯ. ಇಂತಹ ವಿಚಾರಗಳನ್ನು ಅನುಷ್ಠಾನಕ್ಕೆ ತರಲು ಬೇಂದ್ರೆಯವರ ಸಾಹಿತ್ಯದ ಓದು ಅಗತ್ಯವಿದೆ […]

ಉಡುಪಿ ಜಿಲ್ಲೆಯಲ್ಲಿ ಬೀಟ್ ದಿ ಪ್ಲಾಸ್ಟಿಕ್ ಜಾಗೃತಿ ಅಭಿಯಾನ

ಉಡುಪಿ ಜಿಲ್ಲೆಯಲ್ಲಿ ಬೀಟ್ ದಿ ಪ್ಲಾಸ್ಟಿಕ್ ಜಾಗೃತಿ ಅಭಿಯಾನ  ಉಡುಪಿ, ಜೂನ್ 03 : ರಾಜ್ಯದ ಕರಾವಳಿ ಭಾಗದಲ್ಲಿ  ಪ್ಲಾಸ್ಟಿಕ್ ಅನ್ನು ತಿರಸ್ಕರಿಸಿ, ಕಡಿಮೆ ಮಾಡಿ, ಮರುಬಳಕೆ ಮಾಡಿ ಮತ್ತು ಮರುಬಳಕೆ ಮಾಡಿ ಎಂಬ ವಿಶಿಷ್ಟ ಘೋಷಣೆಯೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ಮೇ 27 ರಂದು ಕಾರವಾರದಿಂದ ಆರಂಭವಾದ ಬೀಟ್ ದಿ ಪ್ಲಾಸ್ಟಿಕ್ ಜಾಗೃತಿ ಅಭಿಯಾನ ಯಾತ್ರೆಯು ಕರಾವಳಿಯ ವಿವಿಧ ಭಾಗಗಳಿಗೆ ಸಂಚರಿಸಿದ್ದು, ಇದುವರೆಗೆ ಕಾರವಾರ, ಗೋಕರ್ಣ, ಕುಮಟಾ, ಹೊನ್ನಾವರ, ಮುರ್ಡೇಶ್ವರ, ಬೈಂದೂರು, […]

ಉಡುಪಿ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ರಘುಪ್ರವೀರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ

ಉಡುಪಿ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಶ್ರೀ ಪಾದರಾಜರ ಆರಾಧನಾ ಪ್ರಯುಕ್ತ ರಘುಪ್ರವೀರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಪಾದರಾಜರ ಆರಾಧನಾ ಮಹೋತ್ಸವ

ಉಡುಪಿಯ ಶ್ರೀಕೃಷ್ಣಮಠದಲ್ಲಿ, ಶ್ರೀಪಾದರಾಜರ ಆರಾಧನಾ ಮಹೋಥಶೌಧ ವೈಭವದೊಂದಿಗೆ ಮೆರವಣಿಗೆ ನಡೆಯಿತು. ಪ್ರಯುಕ್ತ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ  ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಸುವರ್ಣರಥದಲ್ಲಿ ಶ್ರೀಪಾದರಾಜರ ಗ್ರಂಥ ಮತ್ತು ಭಾವಚಿತ್ರವನ್ನಿಟ್ಟು ವೈಭವದೊಂದಿಗೆ ಮೆರವಣಿಗೆ ನಡೆಯಿತು.