ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಏಪ್ರಿಲ್ 15 ವರೆಗೆ ನ್ಯಾಯಾಂಗ ಬಂಧನ
(New Dhelhi) ನವದೆಹಲಿ: ಆಪಾದಿತ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಇಂದು ಅಂತ್ಯಗೊಂಡಿದ್ದು, ಅವರನ್ನು ಬೆಳಿಗ್ಗೆ 11 ಗಂಟೆಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಲಯವು ಮತ್ತೆ ಏಪ್ರಿಲ್ 15 ವರೆಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮಾರ್ಚ್ 21 ರಂದು ಬಂಧಿತರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರವರೆಗೆ ನ್ಯಾಯಾಲಯ ಇಡಿ ಕಸ್ಟಡಿಗೆ ಒಪ್ಪಿಸಿತ್ತು.
ತನ್ನ ಬಂಧನ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದಿರುವ ಕೇಜ್ರಿವಾಲ್, ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಕೇಜ್ರಿವಾಲ್ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ಬಂಧನ ಖಂಡಿಸಿ ಭಾನುವಾರ
ದೆಹಲಿಯ ರಾಮ್ಲೀಲಾ ಮೈದಾನಲ್ಲಿ ಇಂಡಿಯಾ ಮೈತ್ರಿಕೂಟದ ವತಿಯಿಂದ ‘ಪ್ರಜಾ ಪ್ರಭುತ್ವ ರಕ್ಷಿಸಿ’ ಎಂಬ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.

