• Home  
  • District In-charge Minister Lakshmi Hebbalkar visits family at Kaup Sri Hosa Marigudi
- ಧಾರ್ಮಿಕ

District In-charge Minister Lakshmi Hebbalkar visits family at Kaup Sri Hosa Marigudi

Share: ಕಾಪು ಶ್ರೀ ಹೊಸ ಮಾರಿಗುಡಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಭೇಟಿ (District In-charge Minister Lakshmi Hebbalkar visits family at Kaup Sri Hosa Marigudi) ಕಾಪು ಶ್ರೀ ಹೊಸ ಮಾರಿಗುಡಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಭೇಟಿ  ಮಾರಿಗುಡಿ ವ್ಯವಸ್ಥಾಪನಾ ಸಮಿತಿಯಿಂದ ಸಚಿವೆಗೆ ಸನ್ಮಾನ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಅವರ […]

(Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳಿ, ತಾಯಿ ಗಿರಿಜಾ ಹಟ್ಟಿಹೋಳಿ ಮತ್ತು ಕುಟುಂಬಸ್ಥರೊಂದಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

  ಹೊಸ ಮಾರಿಗುಡಿಯ ಅರ್ಚಕ ವೇದ ಮೂರ್ತಿ ಶ್ರೀಧರ ತಂತ್ರಿಯವರು ಮಾರಿಯಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

   ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗೌರವಿಸಲಾಯಿತು.

  ದೇವಸ್ಥಾನದ ಎದುರಿನ ರಾಷ್ಟ್ರೀಯ ಹೆದ್ದಾರಿ  66 ಹೆದ್ದಾರಿಯ ಡೈವರ್ಶನ್ ಅಂಡರ್ ಪಾಸ್ ಬಳಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ರವರು ಸಚಿವೆಗೆ ಮನವಿ ನೀಡಲಾಯಿತು.

  ಇಲಾಖೆಯಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದರು.

 ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಪ್ರಮುಖರಾದ  ಯೋಗೀಶ್ ವಿ. ಶೆಟ್ಟಿ, ಜಯರಾಮ್ ಆಚಾರ್ಯ, ಸಾವಿತ್ರಿ ಗಣೇಶ್, ಕಾಪು ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್‌ ಮುಖಂಡರುಗಳಾದ ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.