(lady hill) ಲೇಡಿಹಿಲ್ ಬಳಿ ಕಾರ್ ಹಿಟ್ ಅಂಡ್ ರನ್ : ಓರ್ವ ಯುವತಿ ಮೃತ್ಯು ನಾಲ್ವರು ಗಂಭೀರ..!
(mangaluru) ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದ ಕಾರಿನ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಕುದ್ರೋಳಿ ದೇವಸ್ಥಾನಕ್ಕೆ ಬಂದು ಹಿಂದೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ
ನಗರದ ಲೇಡಿ ಹಿಲ್ ಮಣ್ಣಗುಡ್ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ, ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ (23) ಎಂದು ಗುರುತ್ತಿಸಲಾಗಿದೆ.
ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ912) ಗಂಭೀರ ಗಾಯಗೊಂಡ ಇತರ ನಾಲ್ವರು ಯುವತಿಯರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
