ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರಿಗೆ ಅಭಿನಂದನೆ
ಕಾಪು, ನ. 12 : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಅವರನ್ನು ಮಂಗಳವಾರ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸಮ್ಮಾನಿಸಿ, ಗೌರವಿಸಲಾಯಿತು.
ಅಭಿನಂದನೆ ಸ್ವೀಕರಿಸಿದ ವೇ. ಮೂ. ಶ್ರೀನಿವಾಸ ತಂತ್ರಿಯವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಮಾತನಾಡಿದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ. ರವಿಕಿರಣ್, ಸಮಿತಿಯ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ, ಉದ್ಯಮಿಗಳಾದ ನೈಮಾಡಿ ನಾರಾಯಣ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಕಲ್ಯ, ಬೀನಾ ವಿ. ಶೆಟ್ಟಿ, ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ, ದೇಗುಲದ ಪ್ರಬಂಧಕ ಗೋವರ್ಧನ್ ಸೇರಿಗಾರ್, ದಾಮೋದರ ಶರ್ಮಾ ಉಪಸ್ಥಿತರಿದ್ದರು.
ನಿರ್ಮಲ್ ಕುಮಾರ್ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

